
ಆನೇಕಲ್.ಜೂ೨೮:ನೆರಳೂರು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತೋತ್ಸವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಇದೇ ಸಂಧರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ನಾಡಪ್ರಭು ಕೆಂಪೇಗೌಡರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ನೆರಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುನಾಥ್ ರವರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಗುಡ್ಟಹಟ್ಟಿ ಗ್ರಾಮದ ನಿವಾಸಿಗಳಿಗೆ ಗ್ರಾಮ್ ಟಾನಾ ಈ ಖಾತೆಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು ಹಾಗೆಯೇ ಸಂವಿದಾನ ಪೀಠಿಕೆಯನ್ನು ಸಹ ಉಚಿತವಾಗಿ ನೀಡಲಾಯಿತು. ವಿಶೇಷವಾಗಿ ಎಲ್ಲಾ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರಿಗೆ ಕೆಂಪೇಗೌಡರ ಪುತ್ಥಳಿಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ನೆರಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಗುಡ್ಡಹಟ್ಟಿ ನವೀನ್ ಗೌಡರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ನೆರಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ರತ್ನಮ್ಮ. ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಂಚಾಯಿತಿ ಅದಿಕಾರಿಗಳು. ಸಿಬ್ಬಂದಿ ವರ್ಗದವರು ಹಾಜರಿದ್ದರು.