
ಸಂಜೆವಾಣಿ ವಾರ್ತೆ,
ವಿಜಯಪುರ,ಜು.೨೧:ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಸಾಮಾಜಿಕ ಸಮಾನತೆಗಾಗಿ ಜನ ಆದೋಲನ ಸಮಾವೇಶ ಜು. ೨೨ರಂದು ಮಧ್ಯಾಹ್ನ ೧೨.೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ನಡೆಯಲಿದೆ.
ರಾಜ್ಯ ಸಂಘಟನಾ ಸಂಚಾಲಕÀ ರಮೇಶ ಆಸಂಗಿ, ಬೆಳಗಾವಿ ವಿಭಾಗೀಯ ಸಂಚಾಲಕ ವಿನಾಯಕ ಗುಣಸಾಗರ ಮತ್ತು ಜಿಲ್ಲಾ ಸಂಚಾಲಕÀ ಅಶೋಕ ಚಲವಾದಿ ಅವರು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಮಾವೇಶ ನಿಮಿತ್ತ ಬೆಳಿಗ್ಗೆ ೧೧ ಗಂಟೆಗೆ ಬೌದ್ಧ ವಿಹಾರದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ರಸ್ತೆಗಳ ಮಾರ್ಗವಾಗಿ ರಂಗಮAದಿರ ತಲುಪುವುದು. ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠ ಸಂಸ್ಥಾನದ ಪ.ಪೂ.ಶ್ರೀ.ಶ್ರೀ. ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. ಲೆÆÃಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ೨೦೧೧ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ೨೦೨೫ನೇ ಸಾಲಿನ ಡಾ. ಬಾಬು ಜಗಜೀವನರಾಮ ಪ್ರಶಸ್ತಿ ಪುರಸ್ಕೃತ ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಗುವುದು. ಮೈಸೂರಿನ ಡಾ. ಸುಜಾತಾ ಚಲವಾದಿ, ತಾಳಿಕೋಟೆಯ ಎಸ್.ಕೆ. ಕಾಲೇಜು ಸಹಾಯಕ ಪ್ರಾಧ್ಯಾಪಕ ಶಂಕರ ದೇವನೂರ ಉಪನ್ಯಾಸ ನೀಡುವರು. ಮಾಜಿ ಶಾಸಕ ಪ್ರೊ. ರಾಜು ಆಲಗೂರ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ರಾಜ್ಯ ಸಂಚಾಲಕ ಬೆಂಗಳೂರಿನ ಹೆಣ್ಣೂರು ಶ್ರೀನಿವಾಸ ವಹಿಸಿಕೊಳ್ಳುವರು ಎಂದು ತಿಳಿಸಿದರು.
ಧಾರವಾಡ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕ ಶರಣಪ್ಪ ಸುಣಗಾರ, ಶಾಸಕ ಅಶೋಕ ಮನಗೂಳಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಪಾಟೀಲ (ಲಿಂಗದಳ್ಳಿ), ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್, ಜಿ.ಪಂ. ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ, ಎಡಿಸಿ ಸೋಮಲಿಂಗ ಗೆಣ್ಣೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು ೫೦೦೦ಕ್ಕೂ ಹೆಚ್ಚು ಜನ ಸೇರುವರು. ಜನರಲ್ಲಿ ಜಾಗೃತಿ ಒಗ್ಗಟ್ಟು ಹೋರಾಟ ರೂಪಿಸಲು ಸಮಿತಿ ಮುಂದಾಗಿದೆ. ಪ್ರಗತಿಪರರು, ಸಕ್ರಿಯ ಕಾರ್ಯಕರ್ತರು, ಅಂಬೇಡ್ಕರವಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಹೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ಮನವಿ ಮಾಡಿಕೊಳ್ಳುತ್ತದೆ ಎಂದರು.
ಈ ಸಂದರ್ಭದಲ್ಲಿ ರೇಣುಕಾ ಮಾದರ, ಯಶೋದಾ ಮೇಲಿನಕೇರಿ, ಶರಣು ಸಿಂದೆ, ಪ್ರಕಾಶ ಗುಡಿಮನಿ, ಲಕ್ಕಪ್ಪ ಬಡಿಗೇರ, ಪರಶುರಾಮ ದಿಂಡವಾರ ಸೇರಿದಂತೆ ಅನೇಕ ದಲಿತ ಮುಖಂಡರು ಇದ್ದರು.