ವಿವೇಕಾನಂದ ವಿದ್ಯಾ ನಿಕೇತನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ:ಸೆ.25:ಶಾಲಾ ಶಿಕ್ಷಣ ಇಲಾಖೆಯು ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯ ಮಕ್ಕಳು ಉತ್ತಮ ಸಾಧನೆ ಮಾಡಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಈಜು ಸ್ಪರ್ಧೆಯ 50, 100, 200 ಮೀಟರ್ ಬ್ರೆಸ್ಟೋಕದಲ್ಲಿ ಸಮರ್ಥ ರವಿಕುಮಾರ ಹೆಬ್ಬಾರೆಪ್ರಥಮ ಸ್ಥಾನ, 50, 100, 400ಮೀ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಸುಮಿತ ಶರಣಬಸಪ್ಪ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯೋಗ ಸ್ಪರ್ಧೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ಪ್ರತಿಕ್ಷಾವಿವೇಕಾನಂದ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಮಕ್ಕಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲ ಸಿದ್ದಪ್ಪ ಭಗವತಿ,ದೈಹಿಕ ಶಿಕ್ಷಕರಾದ ಶ್ರೀಲತಾ ನಾಯಕ,ಬಸವರಾಜ ಮಜ್ಜಗೆ,ಶಿಕ್ಷಕರು ಹಾಗೂ ಪೆÇೀಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.