
ಕಲಬುರಗಿ,ಸೆ.30: ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಹಿರಿಯ ಮುಖಂಡ ನೀಲಕಂಠರಾವ್ ಮೂಲಗೆ ಅವರು ನಿರಾಕರಿಸಿದ್ದಾರೆ.ಈ ಕುರಿತು ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನನಗೆ ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ. ಅದನ್ನು ನಾನು ಸ್ವೀಕಾರ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು.
ಮೊದಲು ಕೆಕೆಆರ್ಟಿಸಿ ಅಧ್ಯಕ್ಷ ಸ್ಥಾನ ನೀಡಿದ್ದಿರೀ. ಅದೇ ಸ್ಥಾನ ಕೊಟ್ಟರೆ ಸ್ವೀಕಾರ ಮಾಡುತ್ತೇನೆ. ಇಲ್ಲದಿದ್ದರೆ ಬೇರೆ ಯಾವ ಸ್ಥಾನ ಬೇಡ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಹಿಂದೆಯೂ ಸೇವೆ ಸಲ್ಲಿಸಿದ್ದೀನಿ. ಇನ್ನು ಮುಂದು ಕೂಡ ಕಾಂಗ್ರೇಸ್ ಪಕ್ಷಕ್ಕಾಗಿ ನಾನು ಸೇವೆ ಸಲ್ಲಿಸುತ್ತೇನೆ ಎಂದು ನೀಲಕಂಠರಾವ್ ಮೂಲಗೆ ಯವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.