ಆಸೀಸ್ ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ಗೆ ಕೊಕ್, ಗಿಲ್ ಗೆ ನಾಯಕಪಟ್ಟ

ಅಹಮದಾಬಾದ್, ಅ.4- ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ.ಏಕದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾಗೆ ಕೊಕ್ ನೀಡಲಾಗಿದ್ದು ಶುಭ್ಮನ್ ಗಿಲ್ ಗೆ ನಾಯಕ ಪಟ್ಟ ನೀಡಲಾಗಿದ್ದು, ಶ್ರೇಯಸ್ ಅಯ್ಯರ್ ಗೆ ಉಪನಾಯಕನ ಸ್ಥಾನ ನೀಡಲಾಗಿದೆ.


15 ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಜಸ್ರ್ಪೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.


ನಾಯಕತ್ವ ಬದಲಾವಣೆ ಕುರಿತು ರೋಹಿತ್ ಶರ್ಮಾಗೆ ಮಾಹಿತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ ಕರ್ ತಿಳಿಸಿದರು.


ಏಷ್ಯಾ ಕಪ್ ನಲ್ಲಿ ಮಿಂಚಿದ್ದ ಅಭಿಷೇಕ್ ಶರ್ಮಾರಿಗೆ ಏಕದಿನ‌ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಯಿತ್ತು.‌ ಆದರೆ ಆಸೀಸ್ ಪ್ರವಾಸಕ್ಕೆ ಅವರನ್ನು ಆಯ್ಕೆ ಮಾಡಿಲ್ಲ
ಅ.19ರಿಂದ ನವೆಂಬರ್‌ 8ರ ವರೆಗೆ ಮೂರು ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳ ಸರಣಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಇದಕ್ಕಾಗಿ ಭಾರತ ತಂಡ ಶೀಘ್ರವೇ ಆಸ್ಟ್ರೇಲಿಯಾಕ್ಕೆ ಪ್ರವಾಸ ತೆರಳಲಿದ್ದು, ಅಭ್ಯಾಸ ಆರಂಭಿಸಲಿದೆ.

ಭಾರತ ಏಕದಿನ ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್‌ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್‌ ಕೃಷ್ಣ, ಧ್ರುವ್‌ ಜುರೆಲ್ (ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್‌.

ಭಾರತ ಟಿ20 ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ವರುಣ್ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್‌ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್‌ ಸುಂದರ್‌