
ಮಾಜಿ ಸಚಿವರು ಹಾಗೂ ನರಸಿಂಹರಾಜ ಕ್ಷೇತ್ರದ ಶಾಸಕರು ಮತ್ತು ಕೆಪಿಸಿಸಿ ಕಾರ್ಯಧ್ಯಕ್ಷರಾದ ತನ್ವೀರ್ ಸೇಠ್ ರವರ ಹುಟ್ಟುಹಬ್ಬವನ್ನು ಅವರ ನಿವಾಸದಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಶಿವಣ್ಣ,ಮೈಸೂರು ನಗರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರತಾಪ್, ಚಾಮರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನಿಶಾಂತ್ ಪಟೇಲ್,ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಲ್ಲೇಶ್,ಚಾಮರಾಜ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂದ್ರು ಎನ್, ಅಜೀಜ್ ಸೇಠ್ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಕೇಶ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರಗಳಾದ ಚೇತನ್,ಪ್ರಖ್ಯಾತ,ವಿಕ್ರಂ, ಆಕಾಶ್, ಮಯೂರ ಹಾಗೂ ಇನ್ನು ಮುಂತಾದವರು ಉಪಸ್ಥಿತರಿದ್ದರು.