
ಕಲಬುರಗಿ: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಕೃತ್ಯವನ್ನು ಖಂಡಿಸಿ ಗುಲಬರ್ಗಾ ನ್ಯಾಯವಾದಿಗಳ ಸಂಘದ ಉಚ್ಚ ನ್ಯಾಯಾಲಯ ಘಟಕದ ವತಿಯಿಂದ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಇಂದು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಎಸ್.ವಿ.ಪಸಾರ್, ಅನಂತ eಹಗಿರದಾರ, ಗೌರೀಶ ಕಾಶೆಂಪೂರ, ಮಂಜುನಾಥ ಗಿಣ್ಣಿ, ರೇಖಾ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.