ಹ್ಯಾಂಡ್‍ಬಾಲ್ ಸ್ಪರ್ಧೆ: ಎಸ್.ಆರ್.ಎನ್ ಮೆಹತಾ ಶಾಲಾ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ಕಲಬುರಗಿ,ಅ.8: ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಿದ ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ನಗರದ ಎಸ್. ಆರ್. ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17 ವರ್ಷದ ಒಳಗಿನ ಬಾಲಕಿಯರ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಸೋನಾಕ್ಷಿ,ಪ್ರತೀಕ್ಷಾ,ಶ್ರದ್ಧಾ
14 ವರ್ಷದ ಒಳಗಿನ ಬಾಲಕಿಯರ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಪ್ರತುಷಾ ಜಿ,ಅನಘಾ ಜೆ,ಆರೋಹಿ ಕೆ
14 ವರ್ಷದ ಒಳಗಿನ ಬಾಲಕರ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿನಿತ ಕೆ,ವಿಭೂವನ ಎನ್,
17 ವರ್ಷದ ಒಳಗಿನ ಸ್ಪರ್ಧೆಯಲ್ಲಿ ಓಂಕಾರ ಹೆಚ್,ಅಭಿಷೇಕ ಯು ಅವರುವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಬಾಲಕಿಯರು ಪ್ರಥಮ ಸ್ಥಾನ ಮತ್ತು ಬಾಲಕರು ದ್ವಿತಿಯ ಸ್ಥಾನವನ್ನು ಪಡೆಯುವುದರ ಮೂಲಕ ತೂಮಕೂರನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಚಕೋರ ಮೆಹತಾ, ಪ್ರಾಚಾರ್ಯರಾದ ಪ್ರೀತಿ ಮೆಹತಾ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಬಸವರಾಜ ತಳಕೇರಿ, ಹ್ಯಾಂಡ್‍ಬಾಲ ತರಬೇತುದಾರ ಮಯೂರ ಉಖಂಡೆ ಹಾಗೂ ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.