ಶಾಂತಿ ಮಾತುಕತೆ ಮೋದಿ ಸ್ವಾಗತ

ನವದೆಹಲಿ,ಅ.9- ಇಸ್ರೇಲ್ ಮತ್ತು ಹಮಾಸ್ ನಡುವೆ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಸಮ್ಮತಿ ಸೂಚಿಸಿರುವ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗರಿಸಿದ್ದಾರೆ.


ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಸಂಘರ್ಷದಿಂದ ಸಾವಿರಾರು ಮಂದಿ ಸಾವನ್ನಪ್ಪಿ ಲಕ್ಷಾಂತರ ಮಂದಿ ನಿರಾಶ್ರಿತರಾಗಿರುವ ಹಿನ್ನೆಲೆಯಲ್ಲಿ ಶಾಂತಿ ಒಪ್ಪಂದ ಅತ್ಯಂತ ಮಹತ್ವ ಪಡೆದಿದೆ ಎಂದಿದ್ದಾರೆ


ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಮತ್ತು ಹಮಾಸ್ ಸಂಘರ್ಷ ನಿಲ್ಲಿಸಿ ಒತ್ತೆಯಾಳುಗಳು ಮತ್ತು ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಉಭಯ ಕಡೆಯವರು ಒಪ್ಪಿಕೊಂಡಿರುವುದು ಸ್ವಾಗತಾರ್ಹ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಸ್ವಾಗತಿಸಿದ್ದಾರೆ


ಇಸ್ರೇಲ್ ಮತ್ತು ಹಮಾಸ್ ನಡುವಿನ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ಖಚಿತಪಡಿಸುತ್ತದೆ ಎಂದು ಹೇಳಿರುವ ಅವರು ಇದೇ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ’ಬಲವಾದ ನಾಯಕತ್ವವನ್ನು ಶ್ಲಾಘಿಸಿದ್ದಾರೆ.


ಅಮೇರಿಕಾ “ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದ ಸ್ವಾಗತಿಸಲಾಗುವುದು “ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾದ ಜನರಿಗೆ ಅಗತ್ಯ ಮಾನವೀಯ ನೆರವು ಅವರಿಗೆ ವಿಶ್ರಾಂತಿ ತರುತ್ತದೆ ಮತ್ತು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುತ್ತದೆ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ


೨೦೨೩ರ ಅಕ್ಟೋಬರ್ ೭ ರ ದಾಳಿ ಆರಂಭವಾಗಿ ಅಕ್ಟೋಬರ್ ೭ಕ್ಕೆ ಎರಡು ವರ್ಷ ಪೂರ್ಣಗೊಂಡಿತ್ತು.ಎರಡು ವರ್ಷಗಳ ಹಳೆಯ ಯುದ್ಧವನ್ನು ಕೊನೆಗೊಳಿಸಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ ಎಂದು ಹೇಳಿದ್ದಾರೆ