ಕಲಬುರಗಿ: ಶಹಾಬಾದ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಗೆ ಅವಮಾನ ಮಾಡಿದ ಕಿಡಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಆನಂದ ಎಂ.ಮಸ್ಕಿ, ಮುಖಂಡರಾದ ಎಲ್.ಆರ್.ಬೋಸ್ಲೆ, ಮಹಾದೇವ ಧನ್ನಿ, ತಿಪ್ಪಣ್ಣ ಕಿನ್ನೂರ, ಶರಣು ಹಂಗರಗಿ, ಚಂದ್ರಕಾಂತ ಬಸನಾಳ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.