ಕಲಬುರಗಿ: ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಣ್ಣೆತೊರೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಅವರ ವರ್ಗಾವಣೆಗೆ ಆಗ್ರಹಿಸಿ ಇಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದ ಮುಂದೆ ಬೊಬ್ಬೆ ಚಳುವಳಿ ನಡೆಸಿ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ,ಜಿಲ್ಲಾಧ್ಯಕ್ಷ ಸಂದೀಪ ಭರಣಿ,ಸತೀಶ ಕಡೂನ್,ಉದಯ ಸೀತನೂರ ಸೇರಿದಂತೆ ಹಲವರು ಪಾಲ್ಗೊಂಡರು .