ವಾರ್ತಾ ಇಲಾಖೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೀದರ್:ನ.1: ನಗರದ ರೈಲ್ವೆ ನಿಲ್ದಾಣ ಹತ್ತಿರವಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ ಕರ್ನಾಟಕ ರಾಜ್ಯೋತ್ಸವದ ನಿಮಿತ್ಯ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಜರುಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಕುಳ್ಳೊಳ್ಳಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೆÇೀರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ವಾರ್ತಾ ಇಲಾಖೆಯ ಪ್ರಭಾರ ವಾರ್ತಾ ಸಹಾಯಕ ವಿಜಯಕೃಷ್ಣ ಸೋಲಪುರ, ಇಲಾಖೆಯ ಇತರೆ ಅಧಿಕಾರಿಗಳಾದ ತನ್ವೀರ್ ಇಕ್ಬಾಲ್, ನರೇಶ, ಬಿಂದುಸಾರ ಪನಶೆಟ್ಟಿ, ಅವಿನಾಶ, ಆಶಿಸ್, ನಾಗಶೆಟ್ಟಿ, ಗೀತಾಬಾಯಿ ಹಾಗೂ ಇತರರು ಕಾರ್ಯಕ್ರಮದಲ್ಲಿದ್ದರು.