
ಕಲಬುರಗಿ,ನ.01:70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕಲಬುರಗಿ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಶನಿವಾರ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಡಿ.ಎಸ್. ಯವರಾದ ಲಕ್ಷ್ಮಣ ಶೃಂಗೇರಿ, ಪಿಡಿ ಯವರಾದ ಜಗದೇವಪ್ಪ ಬಿ, ಸಿಪಿಓ ರಾದ ಶರಣಯ್ಯ ಮಠಪತಿ, ಸಿಎಓ ರಾದ ವಿಕಾಸ ಸಜ್ಜನ, ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.





























