ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ,ನ.20-ಚಿತ್ತಾಪುರ ತಾಲೂಕಿನ ಪೇಠಶಿರೂರ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವೆಂಕಟೇಶ ರಾಘವೇಂದ್ರ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪುರಾತತ್ವ ಇಲಾಖೆ ನಡೆಸುವ ಚಿತ್ರಕಲಾ ಸ್ಪರ್ಧೆಯಲ್ಲಿ ಈ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ಮಿಂಚಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು, ಸಿಬ್ಬಂದಿ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.