Home ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

ಭಾಲ್ಕಿ,ಫೆ.೫: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭಕ್ಕೆ ದಿನಗಣನೇ ಶುರುವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಒತ್ತಡ, ಗೊಂದಲ, ಆತಂಕಕ್ಕೆ ಒಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಹೇಳಿದರು. ಪಟ್ಟಣದ ಪುರಭವನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೀದರ್, ಶಾಲಾ ಶಿಕ್ಷಣ ಇಲಾಖಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ೨೦೨೫-೨೬ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಈಗಿನಿಂದಲೇ ಸಿದ್ಧತೆ ಮಾಡಿಕೊಂಡು ಓದಿನ ಕಡೆಗೆ ಹೆಚ್ಚಿನ ಸಮಯ ನೀಡಬೇಕು. ತಿಳಿಯದ ವಿಷಯಗಳ ಬಗ್ಗೆ ತಮ್ಮ ಶಿಕ್ಷಕರ ಬಳಿ ಕೇಳಿ ಇರುವ ಸಮಸ್ಯೆ, ಗೊಂದಲಗಳನ್ನು ಬಗೆ ಹರಿಸಿಕೊಳ್ಳಬೇಕು. ಶಿಕ್ಷಕರಾದವರೂ ಕೂಡ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ ತಾಲೂಕಿನ ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಜಿಲ್ಲೆಗೆ ಪ್ರಥಮ ಬರುವಂತೆ ಶ್ರಮ ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತು ಕಾಟಕರ್, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ, ವಿಷಯ ಸಂಪನ್ಮೂಲ ವ್ಯಕ್ತಿ ಅವಿನಾಶ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಪ್ರಭು ಡಿಗ್ಗೆ, ನೀಲಕಂಠ, ಸಂದೀಪ ವಾಡೀಕರ್ ಸೇರಿದಂತೆ ಹಲವರು ಇದ್ದರು.