
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ:ಫೆ,9- ವಿಶ್ವವಿದ್ಯಾಲಯ ಅನುದಾನ ಆಯೋಗ ಎಸ್ಸಿ, ಎಸ್ಟಿ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ ನಿಯಮಾವಳಿ 2026 ಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರೆವುಗೊಳಿಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ ಸಾಗರ್ ಬಣ) ಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಯ್ತು.
ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರು ಎ. ಮಾನಯ್ಯ.ಹಾಗೂ ಜಿಲ್ಲಾ ಸಂಚಾಲಕರು ಹೆಚ್. ಬಿ. ಗಂಗಪ್ಪ ಇವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಜಾತಿ, ಧರ್ಮ, ಇನ್ನಿತರ ತಾರತಮ್ಮ ಆಗುತ್ತಿರುವುದನ್ನು ತಡೆಗಟ್ಟಲು ಮಾಡಿರುವ ಯುಜಿಸಿ ನಿಯಮಾವಳಿಗಳನ್ನು ಜಾರಿ ತರಬೇಕು. ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿ ಹೊರಡಿಸಬೇಕು. ಕೇಂದ್ರ ಸರ್ಕಾರ ಬೇಡಿಕೆಗಳನ್ನು ಕೂಡಲೇ ಜಾರಿಗೆ ತರಬೇಕೆಂದು. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ದಲಿತ ವಿಧ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ತರುತ್ತಿರುವ ಕಾನೂನ ವಿಳಂಬ ಮಾಡದೇ ಜಾರಿಗೆ ತರಬೇಕು. ” ರೋಹಿತ್ ವೇಮುಲ ಕಾಯಿದೆ” ಯನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಲೇಬೇಕು.
ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸದೆ ದಲಿತ ವಿಧ್ಯಾರ್ಥಿಗಳ ಸಮಾನತೆ ಉತ್ತೇಜನೆಗಾಗಿ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕೆಂದು ಒತ್ತಾಯಿಸಲಾಯ್ತು.
ಪ್ರತಿಭಟನೆಯಲ್ಲಿ . ಬಿ.ರಾಂಪ್ರಸಾದ್, ಡಾ.ಗಾದಿಲಿಂಗನಗೌಡ, ಸಮಿತಿಯ ಮುಖಂಡರುಗಳಾದ ಹೆಚ್. ಆಂಜಿನೇಯ, ದೇವದಾಸ್ .ಕೆ. ಕೊಳಗಲ್ಲು ಮಲ್ಲಯ್ಯ ಮೊದಲಾದವರು ಪಾಲ್ಗೊಂಡಿದ್ದರು.





















