
ಕಲಬುರಗಿ,ಫೆ.14-ಚಾಕುವಿನಿಂದ ಇರಿದು ವ್ಯಕ್ತಿಯೋರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರುತಿಸಲಾಗಿದೆ.
ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶರಣಬಸಪ್ಪ ಗೌಳಿ ಅವರು ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಸೂಪರ್ ಮಾರ್ಕೆಟ್ನ ಬಾರ್ ಒಂದರ ಪಾಕಿರ್ಂಗ್ ಪ್ರದೇಶದಲ್ಲಿ ನಿಂತಿದ್ದಾಗ, ದುದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ನಗರ ಪೆÇಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಎಸಿಪಿ ಶಿವನಗೌಡ ಪಾಟೀಲ ಹಾಗೂ ಹಾಗೂ ಬ್ರಹ್ಮಪುರ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.























