ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರ ಮೇಲಿನ ಸುಳ್ಳು ಕೇಸು ರದ್ದು ಪಡಿಸಲು ಆಗ್ರಹಿಸಿ ಕೋಲಿ ಕಬ್ಬಲಿಗ ಎಸ್.ಟಿ.ಹೋರಾಟ ಸಮಿತಿ ಹಾಗೂ ಮಲ್ಲಿಕಾರ್ಜುನ ಅಪ್ಪಾಜಿಯವರ ಅಭಿಮಾನಿ ಬಳಗದ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ, ಶಿವಾನಂದ ಹೊನಗುಂಟಿ ಸೇರಿದಂತೆ ಸಮಾಜದ ಮುಖಂಡರು, ಮಲ್ಲಿಕಾರ್ಜುನ ಮುತ್ಯಾ ಅವರ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.