ಮಾ. ೮ ರಂದು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ವಿಶ್ವ ಮಹಿಳಾ ದಿನಾಚರಣೆ – ಆಮಂತ್ರಣ ಪತ್ರ ಬಿಡುಗಡೆ

ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ಮಾ. ೮ ರಂದು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸುಳ್ಯದ ಲಯನ್ಸ್ ಸಭಾಭವನದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ತಾಲೂಕು ಮಹಿಳಾ ಒಕ್ಕೂಟದ ಸಭಾಂಗಣದಲ್ಲಿ ನಡೆಯಿತು.
ಸಾಹಿತಿ ಜಯಮ್ಮ ಚೆಟ್ಟಿಮಾಡ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಹಿಳಾ ದಿನಾಚರಣೆಯ ಮೂಲಕ ಮಹಿಳೆಯರಿಗೆ ಶಕ್ತಿ ನೀಡುವ, ಧೈರ್ಯ ತುಂಬು ಕಾರ್ಯ ನಡೆಯಲಿ. ತಾಲೂಕು ಒಕ್ಕೂಟದ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.
ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಹರಿಣಿ ಸದಾಶಿವ, ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷೆ ಮಧುಮತಿ ಬೊಳ್ಳೂರು, ಕಾರ್ಯದರ್ಶಿ ಹೇಮಾ ವೇಣುಗೋಪಾಲ್, ಖಜಾಂಚಿ ಚಂದ್ರಾಕ್ಷಿ ಜೆ. ರೈ, ಉಪಾಧ್ಯಕ್ಷೆ ಪುಷ್ಪಾ ಮಾಣಿಬೆಟ್ಟು, ನಿರ್ದೇಶಕರುಗಳಾದ ಅನಿತಾ ಸುತ್ತುಕೋಟೆ, ಚಂದ್ರಾವತಿ ಬದಿಕಾನ ಹಾಗೂ ಹೇಮಲತಾ ದೇಂಗೋಡಿ ಮತ್ತು ಸುಮಂಗಲ ಕೋಳಿವಾಡ ಉಪಸ್ಥಿತರಿದ್ದರು.
ಹೇಮಾ ವೇಣುಗೋಪಾಲ್ ಸ್ವಾಗತಿಸಿ, ಚಂದ್ರಾಕ್ಷಿ ಜೆ ರೈ ವಂದಿಸಿದರು.
ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶೈಲಜಾ ಬಿ, ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ. ಶಾಲಿನಿ ವಿ.ಎಲ್, ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಮಾಜಿ ಅಧ್ಯಕ್ಷೆ ಹರಿಣಿ ಸದಾಶಿವ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಾಜಿ ಅಧ್ಯಕ್ಷೆ ಹಾಗೂ ಜಿಲ್ಲಾ ಒಕ್ಕೂಟದ ಜತೆ ಕಾರ್ಯದರ್ಶಿ ಮಧುಮತಿ ಬೊಳ್ಳೂರು ಅತಿಥಿಗಳಾಗಿ ಭಾಗವಹಿಸಿದ್ದಾರೆ.