ನಾಳೆ ಚನ್ನಯ್ಯ ಪುತ್ಥಳಿ ಅನಾವರಣ

ಕೋಲಾರ,ಮಾ.೦೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಟಿ.ಚನ್ನಯ್ಯ ರಂಗಮಂದಿರದ ಆವರಣದಲ್ಲಿ ದಿನಾಂಕ ನಾಳೆ ಟಿ. ಚನ್ನಯ್ಯ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಶಾಸಕರುಗಳಾದ ಎಸ್.ಎನ್.ನಾರಾಯಸ್ವಾಮಿ, ರೂಪಕಲಾ ಶಶಿಧರ್, ಸಂಸದ ಎಂ.ಮಲ್ಲೇಶ್ ಬಾಬು, ಶಾಸಕರಾದ ಕೆ.ವೈ.ನಂಜೇಗೌಡ, ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಎಂ.ಎಲ್.ಸಿ ಗಳಾದ ಇಂಚರ ಗೋವಿಂದರಾಜು, ಚಿದಾನಂದ ಎಂ ಗೌಡ, ಎಂ.ಎಲ್.ಅನಿಲ್ ಕುಮಾರ್, ಡಾ.ಡಿ.ಟಿ.ಶ್ರೀನಿವಾಸ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್ ಭಾಗವಹಿಸುವರು.


ಕಾರ್ಯಕ್ರಮದಲ್ಲಿ ಚನ್ನಯ್ಯ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ. ಪತ್ರಿಕಾ ಮತ್ತು ದೃಶ್ಯ ಮಾಧ್ಯಮ ಮಿತ್ರರಾದ ತಾವುಗಳು ಆಗಮಿಸುವಂತೆ ಕೋರಿದೆ.