
ಕಲಬುರಗಿ,ಮಾ.೩-ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಸಿ ಬಾಂಬ್ ಕರೆ ಹಿನ್ನೆಲೆಂiiಲ್ಲಿ ನ್ಯಾಯಾಲಯದ ಆವರಣರದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನ್ಯಾಯಾಧೀಶರು, ನ್ಯಾಯವಾದಿಗಳು, ಸಿಬ್ಬಂದಿಗಳು ಕೆಲಕಾಲ ಆತಂಕಗೊಂಡಿದ್ದರು. ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೊಂದು ಹುಸಿ ಬಾಂಬ್ ಕರೆಯಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ತಿಳಿಸಿದ್ದಾರೆ.






























