ನವಲಗುಂದ ಸಾರಿಗೆ ಘಟಕದಲ್ಲಿ 2024-25 ನೇ ಸಾಲಿನಲ್ಲಿ ಉತ್ತಮವಾಗಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ ಪ್ರಯುಕ್ತ ಬೆಳಗಾವಿಯಲ್ಲಿ ಜರುಗಿದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 28 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ ಅವರು ನವಲಗುಂದ ಘಟಕದ ಸಾರಿಗೆ ಸಿಬ್ಬಂದಿ ಮೇಲ್ವಿಚಾರಕರಾದ ಆರ್. ಎಮ್. ಮಾಲಗತ್ತಿಯವರಿಗೆ ಉತ್ತಮ ಸಿಬ್ಬಂದಿ ಎಂದು ವಿಶೇಷ ಸೇವಾ ಪುರಸ್ಕಾರ ನೀಡಿ ಅಭಿನಂದಿಸಿದರು.