ಅಪಪ್ರಚಾರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ದೇವಿಂದ್ರ ತಳವಾರ ಆಗ್ರಹ

ಜೇವರ್ಗಿ,ಮಾ.3-ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾದÀ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ದೇವಿಂದ್ರ ತಳವಾರ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ತಪ್ಪು ಮಾಹಿತಿ ಹಬ್ಬಿಸಿರುವವರ ವಿರುದ್ಧ ಸಮಗ್ರ ತನಿಖೆ ನಡೆಸಿ, ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಮಹಲ್ ರೋಜಾ ಮುತ್ಯಾರವರು ಸಾವಿರಾರು ಭಕ್ತರನ್ನು ಹೊಂದಿದ್ದು, ಅವರ ವಿರುದ್ಧ ಸಾಮಾಜಿಕ ಹಾಗೂ ರಾಜಕೀಯವಾಗಿ ಷಡ್ಯಂತ್ರ ನಡೆಯುತ್ತಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಸತ್ಯಾಸತ್ಯತೆ ಹೊರಬರುವ ತನಕ ಕಾನೂನು ಪ್ರಕ್ರಿಯೆಗೆ ಗೌರವ ನೀಡಬೇಕು ಎಂದು ದೇವಿಂದ್ರ ತಳವಾರ ಮನವಿ ಮಾಡಿದರು.