
ಸುಳ್ಯ:ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ನೇತೃತ್ವದಲ್ಲಿ ಮಂಡಳಿಯಲ್ಲಿ ನೋಂದಾಯಿತ ಯುವಕ, ಯುವತಿ ಮಂಡಲಗಳಿಗೆ ಕ್ರೀಡಾಕೂಟ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ರೀಡೆ ಆರೋಗ್ಯದ ಜತೆಗೆ ಮಾನಸಿಕ ಸ್ಥೈರ್ಯ ನೀಡುತ್ತದೆ. ಜನರು ಸದೃಡವಾಗಿರಲು ಕ್ರೀಡೆ ಸಹಕಾರಿ ಎಂದರು.
ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ಅರಣ್ಯ ಸಂಚಾರಿ ದಳ ಮಂಗಳೂರು ಇದರ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ರೈ ಅವರನ್ನು ಸನ್ಮಾನಿಸಲಾಯಿತು. ಸುಳ್ಯ ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಸನ್ಮಾನ ನೆರವೇರಿಸಿದರು.
ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಮಂಡಳಿ ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಮುಖ್ಯ ಅತಿಥಿಗಳಾಗಿದ್ದರು. ಮಂಡಳಿಯ ಕ್ರೀಡಾ ಕಾರ್ಯದರ್ಶಿ ಜನಾರ್ದನ ನಾಗತೀರ್ಥ, ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಕೋಶಾಧಿಕಾರಿ ಲೋಹಿತ್ ಬಾಳಿಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭವಿತಾ ಮತ್ತು ಅಮಿತಾ ಪ್ರಾರ್ಥಿಸಿದರು. ನಿರ್ದೇಶಕ ಗುರುರಾಜ್ ಅಜ್ಜಾವರ ಸ್ವಾಗತಿಸಿದರು. ವಿನಯ ಬೆದ್ರಪಣೆ, ನಮಿತಾ ಹರ್ಲಡ್ಕ ಸನ್ಮಾನಿತರನ್ನು ಪರಿಚಯಿಸಿದರು. ಮಂಡಳಿ ನಿರ್ದೇಶಕ ಪ್ರಸಾದ್ ಕಾಟೂರು ಕಾರ್ಯಕ್ರಮ ನಿರೂಪಿಸಿದರು.






























