
ಯಾದಗಿರಿ: ಮಾ.೫:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಶಯದಂತೆ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಜ್ಞಾನ, ಪರಿಸರ ಅರಿವು ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯ ಪೀ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ದೋರನಹಳ್ಳಿ** ವತಿಯಿಂದ ವಿದ್ಯಾರ್ಥಿಗಳಿಗೆ ಸಮಗ್ರ ಕ್ಷೇತ್ರ ಅಧ್ಯಯನ (ಈieಟಜ Sಣuಜಥಿ) ಪ್ರವಾಸವನ್ನು ಸಡಗರದ ನಡುವೆ ಆಯೋಜಿಸಲಾಯಿತು.
ಶಾಲೆಯ ವತಿಯಿಂದ ಆಯೋಜಿಸಲಾದ ಈ ಕ್ಷೇತ್ರ ಅಧ್ಯಯನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳೀಯ ಪರಿಸರ, ಸಾಮಾಜಿಕ ವ್ಯವಸ್ಥೆ, ಕೃಷಿ ಚಟುವಟಿಕೆಗಳು ಹಾಗೂ ಗ್ರಾಮೀಣ ಜೀವನ ಶೈಲಿಯ ಬಗ್ಗೆ ನೈಜ ಅನುಭವದ ಮೂಲಕ ಅರಿವು ಮೂಡಿಸಲಾಯಿತು. ಪಠ್ಯಪುಸ್ತಕಗಳಲ್ಲಿ ಮಾತ್ರ ಸೀಮಿತವಾಗಿರುವ ಜ್ಞಾನಕ್ಕಿಂತ ಹೊರತು, ಪ್ರಾಯೋಗಿಕ ಅಧ್ಯಯನದ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹಾಗೂ ವೈಜ್ಞಾನಿಕ ಮನೋಭಾವವನ್ನು ವೃದ್ಧಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಿಕ್ಷಕರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಸಿದ್ದಪ್ಪ ಸಿಂಗೆ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭೀಮರೆಡ್ಡಿ ಕಟ್ಟಿಮನಿ, ಮರೆಪ್ಪ ಶಹಾಪೂರ, ಸದಸ್ಯರಾದ ಗಿರೆಪ್ಪ ಕಶೆಟ್ಟಿ, ಆಂಜನೇಯ ಕೌದಿ, ಗುರುನಾಥ ಕಂಚಗಾರ್, ಅನಿಲಕುಮಾರ ಸಂಗೊಡಿ, ಶಿವು ಯಳವೂರ, ಮರೀಲಿಂಗ್ ಕೌದಿ, ದೇವಪ್ಪ ಮಾಡಿಗಿ, ಹೈಯ್ಯಳಪ್ಪ ಗುಂಟ್ನೂರ, ಸಾಮಾಜಿಕ ಹೋರಾಟಗಾರರಾದ ಭೀಮು ಸಾವೂರ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ಕ್ಷೇತ್ರ ಅಧ್ಯಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ನೈಜ ಪರಿಸರದಲ್ಲಿ ಅಧ್ಯಯನ ಮಾಡುವ ಮೂಲಕ ಹೊಸ ಅನುಭವಗಳನ್ನು ಸಂಪಾದಿಸಿಕೊAಡು, ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನು ಅರಿತುಕೊಳ್ಳುವ ಅವಕಾಶವನ್ನು ಪಡೆದರು. ಇಂತಹ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿದ್ದು, ಗ್ರಾಮೀಣ ಶಾಲೆಗಳ ಶಿಕ್ಷಣ ವ್ಯವಸ್ಥೆಗೆ ಹೊಸ ಚೈತನ್ಯ ತುಂಬುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು.






















