
ಕೋಲಾರ: ಮಾ,೫- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ತಾತ್ಕಾಲಿಕ ಶೆಡ್ಡುಗಳನ್ನು ತೆರವುಗೊಳಿಸಿ ನಿರ್ಮಿಸಿರುವ ಹರಾಜುಕಟ್ಟೆ ಹಾಗೂ ಮೇಲ್ಭಾಗದ ೧೮ ಅಂಗಡಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್ ಸುರೇಶ್ ಉದ್ಘಾಟಿಸಿದರು.
ಸಚಿವರೊಂದಿಗೆ ಕೋಲಾರ ಶಾಸಕ ಡಾ. ಕೊತ್ತೂರು ಜಿ. ಮಂಜುನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳಾ, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





















