Home ಜಿಲ್ಲೆ ಸಂಸದ ರಾಧಾಕೃಷ್ಣ ದೊಡ್ಡಮನಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ

ಸಂಸದ ರಾಧಾಕೃಷ್ಣ ದೊಡ್ಡಮನಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ

ಯಾದಗಿರಿ: ಮಾ.೫:ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದರಾದ ರಾಧಾಕೃಷ್ಣ ದೊಡ್ಡಮನಿಅವರು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆ ಪಡೆದು ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡಿರುವುದರಿAದ, ಅವರ ಆರೋಗ್ಯ ಸುಧಾರಣೆಗೆ ಹರಕೆ ಹೊತ್ತಿದ್ದ ಅಭಿಮಾನಿಗಳು ಪವಿತ್ರ ಕ್ಷೇತ್ರವಾದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಹರಕೆಯನ್ನು ಭಕ್ತಿಭಾವದಿಂದ ನೆರವೇರಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶರಣಪ್ಪ ಡಿ. ಮಾನೇಗಾರ ಅವರ ಅಭಿಮಾನಿ ಬಳಗದ ನೇತೃತ್ವದಲ್ಲಿ ದೇವಾಲಯದ ಪವಿತ್ರ ಸನ್ನಿಧಿಯಲ್ಲಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಂಸದರು ಶೀಘ್ರವಾಗಿ ಸಂಪೂರ್ಣ ಆರೋಗ್ಯ ಹೊಂದಿ ಪುನಃ ಸಾರ್ವಜನಿಕ ಸೇವೆಯಲ್ಲಿ ಹೆಚ್ಚಿನ ಚೈತನ್ಯ ಮತ್ತು ಉತ್ಸಾಹದೊಂದಿಗೆ ತೊಡಗಿಸಿಕೊಳ್ಳಲಿ ಎಂದು ಭಗವಂತನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಚಿಕಿತ್ಸೆಗೊಳಗಾದ ಸಂದರ್ಭದಲ್ಲಿ ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲೆಂದು ಅಭಿಮಾನಿಗಳು ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ, ಈಗ ಅವರು ಆರೋಗ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿರುವುದರಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಲಾಗಿದೆ ಎಂದು ಅಭಿಮಾನಿಗಳು ತಿಳಿಸಿದರು. ದೇವರು ಸಂಸದರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಶಕ್ತಿ ನೀಡಿ ಜನಸೇವೆಯ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಆಶೀರ್ವದಿಸಲಿ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹಣಮಂತ ದೊಡ್ಡಮನಿ, ದೇವಪ್ಪಗೌಡ ರಾಚನಳ್ಳಿ, ಜಗದೀಶ್ ಸಜ್ಜನ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಾರೆಡ್ಡಿ ಬೆಳಗುಂದ, ಯುವ ಕಾಂಗ್ರೆಸ್ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಪುಂಡಲಿಕ, ಮಂಜುನಾಥ ಮೇತ್ರಿ, ವೀರೇಶ್ ಸಜ್ಜನ್, ಮಣಿಕಂಠ ನಾಟೀಕರ, ಸಚಿನ್ ಪವಾರ್, ಭಾಸ್ಕರ್ ದೊಡ್ಡ ಸಂಬ್ರ ಸೇರಿದಂತೆ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.