Home ಜಿಲ್ಲೆ ವಿಫಲ ಬಜೆಟ್

ವಿಫಲ ಬಜೆಟ್


ಚನ್ನಮ್ಮನ ಕಿತ್ತೂರು,ಮಾ.೮: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪ?À್ಟವಾಗಿದೆ. ಮಹಿಳೆಯರು, ಯುವಕರು, ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಸ್ಪ?À್ಟ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲವೆಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ತ ಹರಿದಾಯಿದರು.


ಕೇವಲ ಭರವಸೆಗಳು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಬೇಕಾದ ದೂರದೃಷ್ಟಿಯ ಯೋಜನೆಗಳು ಕಾಣಿಸದೇ ಇರುವುದೇ ವಿ?Áದಕರ ಸಂಗತಿ.
ವಿಶೇ?Àವಾಗಿ ಮಹಿಳಾ ಸಬಲೀಕರಣದ ವಿ?Àಯದಲ್ಲಿ ದೊಡ್ಡ ಘೋ?Àಣೆಗಳು ಮಾಡಿದರೂ, ಮಹಿಳೆಯರ ಉದ್ಯಮ, ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಸಮರ್ಪಕ ಕ್ರಮಗಳು ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ.


ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿಯಾಗುವ, ಮಹಿಳೆಯರಿಗೆ ಮತ್ತು ಯುವಕರಿಗೆ ಶಕ್ತಿಕರವಾಗುವ ಬಜೆಟ್ ಅನ್ನು ಜನರು ನಿರೀಕ್ಷಿಸಿದ್ದರು. ಆದರೆ ಈ ಬಜೆಟ್ ಆ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ.