
ಯಾದಗಿರಿ:ಮಾ.೯: ಜಿಲ್ಲೆಯ ಕೇಂದ್ರವಾಗಿರುವ ಯಾದಗಿರಿ ನಗರದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲೇ ಭೀಮಾ ನದಿ ಹರಿಯುತ್ತಿದ್ದರೂ, ನಗರ ನಿವಾಸಿಗಳು ದಿನನಿತ್ಯ ಕುಡಿಯುವ ನೀರಿಗಾಗಿ ಪರದಾಡುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆ ನಗರದಲ್ಲಿ ನೀರಿನ ಕೊರತೆ ಮತ್ತಷ್ಟು ತೀವ್ರಗೊಂಡಿದ್ದು, ಜನಸಾಮಾನ್ಯರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ.
ನಗರದಲ್ಲಿ ಪ್ರತಿ ತಿಂಗಳು ನೀರಿನ ಬಿಲ್ಲುಗಳನ್ನು ನಿಯಮಿತವಾಗಿ ವಸೂಲಿ ಮಾಡಲಾಗುತ್ತಿದ್ದರೂ, ಕೇವಲ ಎರಡು ದಿನಕ್ಕೊಮ್ಮೆ ಅಥವಾ ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ನೀರು ಬಿಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಮನೆ ಬಳಕೆ, ಅಡುಗೆ, ಸ್ವಚ್ಛತೆ ಸೇರಿದಂತೆ ದಿನನಿತ್ಯದ ಅಗತ್ಯಗಳಿಗೆ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಹಿಳೆಯರು ಹಾಗೂ ವೃದ್ಧರು ನೀರಿಗಾಗಿ ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ.
ಈ ಕುರಿತು ವೀರ್ ಸಾವರ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಗುಳಗಿ ಮಾತನಾಡಿ, ಸುರಪುರ ನಗರ ಕೃಷ್ಣಾ ನದಿಯಿಂದ ಸುಮಾರು ೧೫ ರಿಂದ ೨೦ ಕಿಲೋಮೀಟರ್ ದೂರದಲ್ಲಿದ್ದರೂ ಅಲ್ಲಿನ ನಾಗರಿಕರಿಗೆ ೨೪್ಠ೭ ಕುಡಿಯುವ ನೀರಿನ ವ್ಯವಸ್ಥೆ ಯಶಸ್ವಿಯಾಗಿ ಜಾರಿಯಲ್ಲಿದೆ. ಆದರೆ ನದಿ ಅತಿ ಸಮೀಪದಲ್ಲಿರುವ ಯಾದಗಿರಿ ನಗರದಲ್ಲಿ ನಾಗರಿಕರಿಗೆ ದಿನಾಲೂ ಕುಡಿಯುವ ನೀರು ದೊರೆಯದಿರುವುದು ಆಡಳಿತದ ನಿರ್ಲಕ್ಷ್ಯ ಮತ್ತು ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಅವರು ಮುಂದುವರೆದು ಮಾತನಾಡಿ, ನಗರಸಭೆಯ ಪೌರಾಯುಕ್ತರು ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ದೂರವಾಣಿ ಮೂಲಕ ಮಾಹಿತಿ ನೀಡಿದರೂ ಸಮಸ್ಯೆ ಪರಿಹಾರವಾಗಿಲ್ಲ. ನಗರ ನಿವಾಸಿಗಳು ೨೪ ಗಂಟೆ ನೀರು ಬೇಡ, ಆದರೆ ಕನಿಷ್ಠ ಪ್ರತಿದಿನ ನಾಲ್ಕು ಗಂಟೆಗಳ ಕಾಲವಾದರೂ ನಿಯಮಿತವಾಗಿ ಕುಡಿಯುವ ನೀರು ಬಿಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರದ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದರೆ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ನೀರಿನ ಸಮಸ್ಯೆಯಿಂದಾಗಿ ಜನರು ಖಾಸಗಿ ಟ್ಯಾಂಕರ್‌ಗಳ ಮೇಲೆ ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹೆಚ್ಚುವರಿ ಆರ್ಥಿಕ ಭಾರ ಉಂಟಾಗಿದೆ.
ಆದ್ದರಿAದ ನಗರಸಭೆ ಹಾಗೂ ಸಂಬAಧಪಟ್ಟ ಅಧಿಕಾರಿಗಳು ತಕ್ಷಣವೇ ಸಮಸ್ಯೆ ಪರಿಹರಿಸಿ, ಪ್ರತಿದಿನ ನಿಯಮಿತವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಗರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು ಹಾಗೂ ಹೋರಾಟಗಳು ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.




























