Home ಜಿಲ್ಲೆ ಮಹಿಳೆ ಸಮಾಜದ ಪ್ರಗತಿಯ ಸಂಕೇತ

ಮಹಿಳೆ ಸಮಾಜದ ಪ್ರಗತಿಯ ಸಂಕೇತ


ಧಾರವಾಡ,ಮಾ.೯: “ಮಹಿಳೆಯರು ಇಂದು ಕೇವಲ ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗದೆ, ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ÷್ಯದ ಮೂಲಕ ಆಕಾಶಕ್ಕೆ ಏಣಿ ಹಾಕುತ್ತಿದ್ದಾರೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅವರ ಈ ಸಾಧನೆಗೆ ಭದ್ರ ಬುನಾದಿ ಹಾಕಿವೆ,” ಎಂದು ಧಾರವಾಡ ೭೧ ವಿಧಾನಸಭಾ ಮತಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅರವಿಂದ ಏಗನಗೌಡರ ಹೇಳಿದರು.


ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಧಾರವಾಡದ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಃಇಔ) ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮ ಹಾಗೂ ಪಂಚ ಗ್ಯಾರಂಟಿಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


ಧಾರವಾಡ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ (ಇಔ) ಗಂಗಾಧರ ಕಂದಕೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಗ್ಯಾರಂಟಿ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಕದಂ, ಸಿದ್ದಪ್ಪ ಅಗಸಿಮನಿ, ಪರಮೇಶ್ವರ ಕರಿಕಟ್ಟಿ, ಪಂಚ ಗ್ಯಾರಂಟಿ ಅನುಷ್ಠಾನ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಜರಿದ್ದರು.