
ಚನ್ನಮ್ಮನ ಕಿತ್ತೂರು,ಮಾ.೧೧: ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯದ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುವುದು ಸ್ಪಷ್ಟವಾಗಿದೆ ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಂತೇಶ ದೊಡ್ಡಗೌಡರ ಹೇಳಿದ್ದಾರೆ. ಮಧ್ಯಮವರ್ಗದ ಕುಟುಂಬದವರಿಗೆ ಅಭಿವೃದ್ದ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್ನಲ್ಲಿ ಕಾಣಿಸುತ್ತಿಲ್ಲ. ಕೇವಲ ಭರವಸೆಗಳು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್ಟಿನಲ್ಲಿ ಕಾಣಿಸುತ್ತಿದೆ. ಅಭಿವೃದ್ದಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ, ಮತ್ತು ಮೂಲ ಸೌಕರ್ಯಗಳ ಅಭಿವೃದ್ದಿಗೆ ಬೇಕಾದ ದೂರದೃಷ್ಟಿಗಳ ಯೋಜನೆಗಳು ಕಾಣಿಸದೇ ಇರುವುದು ವಿಷಾದಕರ ಸಂಗತಿ. ಎಂದು ಬೇಸರ ವ್ಯಕ್ತಪಡಿಸಿದರು.






















