Home ಜಿಲ್ಲೆ ತುಮಕೂರು ಧರ್ಮಸ್ಥಳ ಸಂಸ್ಥೆ ಬಡವರ ಆಶಾಕಿರಣ

ಧರ್ಮಸ್ಥಳ ಸಂಸ್ಥೆ ಬಡವರ ಆಶಾಕಿರಣ

ಮಧುಗಿರಿ, ಮಾ. ೧೪- ತಾಲ್ಲೂಕಿನ ಮಿಡಿಗೇಶಿ ಹೋಬಳಿ ನೇರಳೇಕೆರೆ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ “೯೦೯ ನೇ ನಮ್ಮೂರ ನಮ್ಮ ಕೆರೆ” ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ಮಾತನಾಡಿ, ಧರ್ಮಸ್ಥಳ ಸಂಸ್ಥೆಯ ಸೇವಾ ಕಾರ್ಯ ಯಾವುದೇ ಸರ್ಕಾರಗಳಿಂದಲೂ ಮಾಡಲಾಗದಂತಹದ್ದು. ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ಬಡವರ ಆಶಾಕಿರಣವಾಗಿದ್ದಾರೆ ಎಂದರು.


ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಶಶಿಧರ್, ಪುರಸಭೆ ಮಾಜಿ ಅಧ್ಯಕ್ಷರುಗಳಾದ ಎಂ.ಕೆ.ನಂಜುಂಡಯ್ಯ, ಲಾಲಪೇಟೆ ಮಂಜುನಾಥ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆಂಚಪ್ಪ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜು, ಹರ್ಷ ಮತ್ತಿತರರು ಉಪಸ್ಥಿತರಿದ್ದರು.