Home ಜಿಲ್ಲೆ ವಡಗೇರಾ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಅಧಿಕಾರಿಗಳಿಗೆ ಮನವಿ

ವಡಗೇರಾ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಅಧಿಕಾರಿಗಳಿಗೆ ಮನವಿ

ಯಾದಗಿರಿ:ಮಾ.೧೫: ವಡಗೇರಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರ ಬದುಕು ಸಂಕಷ್ಟಕ್ಕೀಡಾಗಿದೆ ಎಂದು ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಾಚರಣೆ ಸಮಿತಿ ಯಾದಗಿರಿ ಜಿಲ್ಲಾ ಅಧ್ಯಕ್ಷ ನಾಗರಾಜ್ ಮೆಟ್ಟಿಗೌಡ ಅಸಮಾಧಾನ

ಈ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಅಕ್ರಮ ಮರಳು ಸಾಗಾಟ ಹೆಚ್ಚುತ್ತಿದ್ದು, ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಹೇಳಿದರು. ಭಾರೀ ವಾಹನಗಳ ಸಂಚಾರದಿAದ ಗ್ರಾಮೀಣ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಇದಕ್ಕೆ ಜವಾಬ್ದಾರಿ ಯಾರದು ಎಂಬ ಪ್ರಶ್ನೆ ಸ್ಥಳೀಯರಲ್ಲಿ ಮೂಡಿದೆ ಎಂದು ಆರೋಪಿಸಿದರು.

ವಾಡಗೇರಾ ತಾಲೂಕಿನ ಗೋಡಿಹಾಳ, ಕುಮನೂರ, ಜೋಳದಡಗಿ, ಬೆಂಡೆಬೆAಬಳಿ, ಹೈಯ್ಯಾಳ ಹಾಗೂ ಐಕೂರು ಸೇರಿದಂತೆ ಹಲವು ಗ್ರಾಮಗಳ ನದಿ ತೀರ ಪ್ರದೇಶಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಟ್ರಾಕ್ಟರ್‌ಗಳ ಮೂಲಕ ನದಿಯಿಂದ ಮರಳು ತೆಗೆದು ಹೊಲಗಳಲ್ಲಿ ಸಂಗ್ರಹಿಸಿ ನಂತರ ರಾತ್ರಿ ವೇಳೆಯಲ್ಲಿ ಟಿಪ್ಪರ್ ವಾಹನಗಳ ಮೂಲಕ ವಿವಿಧ ಕಡೆಗಳಿಗೆ ಸಾಗಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಜೆಸಿಬಿ ಯಂತ್ರಗಳ ಮೂಲಕ ನದಿಯಲ್ಲಿ ಮರಳು ತೋಡಿ ಟ್ರಾಕ್ಟರ್‌ಗಳಲ್ಲಿ ತುಂಬಿಸಿ ಬಳಿಕ ಟಿಪ್ಪರ್ ಲಾರಿಗಳಿಗೆ ಡಂಪಿAಗ್ ಮಾಡಿ ಸಾಗಣೆ ಮಾಡಲಾಗುತ್ತಿದೆ. ಈ ಮೂಲಕ ಸರ್ಕಾರಕ್ಕೆ ಕಟ್ಟಬೇಕಾದ ತೆರಿಗೆ ಪಾವತಿಸದೆ ಅಕ್ರಮವಾಗಿ ಮರಳು ವ್ಯಾಪಾರ ನಡೆಸಲಾಗುತ್ತಿದ್ದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅಕ್ರಮ ಮರಳು ಸಾಗಣೆಯಲ್ಲಿ ದಿನಕ್ಕೆ ನೂರಾರು ಟ್ರಾಕ್ಟರ್ ಹಾಗೂ ಟಿಪ್ಪರ್ ವಾಹನಗಳು ಗ್ರಾಮೀಣ ರಸ್ತೆಗಳ ಮೂಲಕ ಸಂಚರಿಸುತ್ತಿರುವುದರಿAದ ರಸ್ತೆಗಳು ಹದಗೆಟ್ಟಿವೆ. ಇದರಿಂದ ಗ್ರಾಮಸ್ಥರು, ರೈತರು ಹಾಗೂ ಶಾಲಾ ವಿದ್ಯಾರ್ಥಿಗಳು ಸಂಚಾರದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದ ಅವರು, ಸಂಬAಧಿತ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.