
ಕಲಬುರಗಿ,ಮಾ.15: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಮಂತ್ರಿ ಉಚ್ಚತ್ತರ್ ಶಿಕ್ಷಾ ಅಭಿಯಾನ (Pಒ-USಊಂ) ಯೋಜನೆಯಡಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾತ್ತಿರುವ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಸಂಯೋಜಿತ ಉಪನ್ಯಾಸ ಮಂದಿರ ಕಟ್ಟಡಗಳ ನಿರ್ಮಾಣಕ್ಕೆ ಶನಿವಾರ ರಾಜದಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡಿಗಲ್ಲು ನೆರವೇರಿಸಿದರು.
ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ, ತರಬೇತಿ, ಕಾರ್ಯಾಗಾರಗಳು, ಸಮ್ಮೇಳನಗಳು ಹಾಗೂ ಆಧುನಿಕ ಅಧ್ಯಯನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಈ ಕಟ್ಟಡ ಹೊಂದಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ಧಿ ಕಲಿಕೆಗೆ ಉಪಯುಕ್ತವಾಗಲಿದೆ. ಕಟ್ಟಡವು ಜಿ+2 ವಿನ್ಯಾಸ ಹೊಂದಿದ್ದು, ಆಧುನಿಕ ತಾಂತ್ರಿಕತೆಯಿಂದ ಒಳಗೊಂಡ ಸುಸಜ್ಜಿತ ಕೊಠಡಿಗಳು, ಪೀಠೋಪಕರಣಗಳು, ಉಪನ್ಯಾಸ ಭವನಗಳು ಹಾಗೂ ಸಹಾಯಕ ಸೌಲಭ್ಯಗಳನ್ನು ಒಳಗೊಂಡಿದೆ.
ಇದೇ ಸಂದರ್ಭದಲ್ಲಿ ಸಚಿವರು ವಿವಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಿದರು. ವಿ.ವಿ.ಯ ಗ್ರಂಥಾಲಯದಲ್ಲಿ ಕೆ.ಎ.ಎಸ್., ಐ.ಎ.ಎಸ್ ಸ್ಪರ್ಧಾತ್ಮಕ ಪುಸ್ತಕ ದೊರೆಯುವಂತಾಗಬೇಕು, ವಿ.ವಿ.ಕ್ಯಾಂಪಸ್ ನಲ್ಲಿ ಮೂಲಸೌಕರ್ಯ ಅಭಿವೃದ್ದಿಪಡಿಸಬೇಕು, ಹಾಸ್ಟೆಲ್ ಸಮಸ್ಯೆ ಬಗೆಹರಿಸಬೇಕು ಎಂದು ವಿದ್ಯಾರ್ಥಿಗಳು ಸಚಿವರಲ್ಲಿ ಮನವಿ ಮಾಡಿದರು. ಅತಿಥಿ ಉಪನ್ಯಾಸಕರು ಸಹ ತಮ್ಮ ಸಮಸ್ಯೆಗಳ ಕುರಿತು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಕುಂದುಕೊರೆತ ಆಲಿಸಿದ ಮಾತನಾಡಿದ ಸಚಿವರು, ಶೀಘ್ರವೆ ವಿ.ವಿ.ಗೆ ಭೇಟಿ ನೀಡಿ ಅರ್ಧ ದಿನ ನಿಮ್ಮೊಂದಿಗಿದ್ದು ನಿಮ್ಮ ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ ಅವರು, ಕೆ.ಕೆ.ಆರ್.ಡಿ.ಬಿ. ಅನುದಾನದಲ್ಲಿ ಕ್ಯಾಂಪಸ್ ನಲ್ಲಿ ಮೂಲಸೌಕರ್ಯ ಕಾಮಗಾರಿಗಳು ಕೈಗೊಳ್ಳಲಾಗುವುದು ಎಂದರು.
ವಿದ್ಯಾರ್ಥಿಗಳಿಗೆ ಕೇವಲ ಪದವಿ ಮುಖ್ಯವಲ್ಲ, ಬದಲಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಬೇಕಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವು ಕಲ್ಯಾಣ ಕರ್ನಾಟಕದ ಭಾಗದ ಯುವಜನತೆಗೆ ನೆರವಾಗಲಿದೆ ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.
ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಸಿಂಧೆ, ಗುಲಬರ್ಗಾ ವಿ.ವಿ. ಕುಲಪತಿ ಪೆÇ್ರ. ಶಶಿಕಾಂತ್ ಎಸ್. ಉಡಿಕೇರಿ, ಕುಲಸಚಿವ ಪೆÇ್ರ. ರಮೇಶ್ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ಎನ್. ಜಿ. ಕಣ್ಣೂರು ಸೇರಿದಂತೆ ವಿ.ವಿ. ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.



























