Home ಜಿಲ್ಲೆ ಕಲಬುರಗಿ ರಾಷ್ಟ್ರೀಯ ಲೋಕ ಅದಾಲತನಲ್ಲಿ 163 ಪ್ರಕರಣಗಳು ಇತ್ಯರ್ಥ:ಒಟ್ಟು 4,24,29,000 ರೂ.ಗಳ ಪರಿಹಾರ ಮಂಜೂರು

ರಾಷ್ಟ್ರೀಯ ಲೋಕ ಅದಾಲತನಲ್ಲಿ 163 ಪ್ರಕರಣಗಳು ಇತ್ಯರ್ಥ:ಒಟ್ಟು 4,24,29,000 ರೂ.ಗಳ ಪರಿಹಾರ ಮಂಜೂರು

ಕಲಬುರಗಿ,ಮಾ.15-ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಮೋಟಾರು ವಾಹನ ವಿಮೆ ಪ್ರಕರಣ, ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸಂಧಾನದ ಮೂಲಕ 163 ಪ್ರಕರಣಗಳನ್ನು ವಿಲೇವಾರಿಗೊಳಿಸಿ ಒಟ್ಟು 4,24,29,000 ರೂ.ಗಳ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಬಸವರಾಜ ಚೇಂಗಟಿ ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದಿಂದ ಬೇರ್ಪಟ್ಟ ದಂಪತಿಗಳನ್ನು ಸಹ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ರಾಜಿ ಸಂದಾನ ಮಾಡಿ ಒಂದುಗೂಡಿಸಲಾಯಿತು. ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಕರ್ನಾಟಕ ಹೈಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಎಸ್.ವಿಶ್ವಜಿತ್ ಶೆಟ್ಟಿ ಹಾಗೂ ಜಿ.ಬಸವರಾಜ ಅವರು ಉಪಸ್ಥಿತರಿದ್ದರು.