
ಕಲಬುರಗಿ: ಮಾ.೧೬:ನಗರದ ದರಿಯಾಪುರ ಬಡಾವಣೆಯಲ್ಲಿರುವ ಶ್ರೀ ಚಂದ್ರಶೇಖರ್ ಡಿ. ಪಾಟೀಲ್ ರೇವೂರ್ ಸ್ಮಾರಕ ಔಷಧ ಭವನದಲ್ಲಿ ಸಂಪೂರ್ಣೇಶ್ವರಿ ಮಹಿಳಾ ಸಬಲೀಕರಣ ಒಕ್ಕೂಟದ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಸಮಾಜ ಸೇವಕಿ ಲಕ್ಷ್ಮೀ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕರ್ನಾಟಕ ಬಿಜೆಪಿ ವಕ್ತಾರ ಡಾ. ಸುಧಾ ಆರ್. ಹಾಲಕಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ತರ ಸಾಧನೆಗಳನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಹಿಳೆಯರ ಶಕ್ತಿ, ಪ್ರತಿಭೆ ಮತ್ತು ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕರಿಗೆ “ಸಂಪೂರ್ಣೇಶ್ವರಿ ಸ್ಫೂರ್ತಿದಾಯಕ ಮಹಿಳಾ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಮಾಜ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಉಪ ಮೇಯರ್ ತೃಪ್ತಿ ಎಸ್. ಲಾಖೆ, ವಿರೋಧ ಪಕ್ಷದ ನಾಯಕಿ ಶೋಭಾ ಗುರುರಾಜ ದೇಸಾಯಿ, ಡಾ. ಸ್ನೇಹಾ ಕೆ., ಕವಿತಾ ಚೌಹಾಣ್, ಡಾ. ಶ್ವೇತಾ ನಿಧಿ, ಅಮೂಲ್ಯ ಶೆಟ್ಟಿ, ಸ್ನೇಹಲ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು



























