Home ಮುಖಪುಟ ಸುದ್ದಿ ಭಾರತದತ್ತ ಎಲ್‌ಪಿಜಿ ಹೊತ್ತ ಹಡಗು

ಭಾರತದತ್ತ ಎಲ್‌ಪಿಜಿ ಹೊತ್ತ ಹಡಗು

ನವದೆಹಲಿ, ಮಾ.೧೬: ಸುಮಾರು ೯೨,೭೦೦ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಮತ್ತು ಶಿವಾಲಿಕ್ ಎಂಬ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತಕ್ಕೆ ಬರುತ್ತಿವೆ.


ಶಿವಾಲಿಕ್ ಮಾರ್ಚ್ ೧೬ರಂದು ಮತ್ತು ನಂದಾ ದೇವಿ ಮಾರ್ಚ್ ೧೭ರಂದು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿತ್ತು. ಈಗ ಆ ನಿರೀಕ್ಷೆಯಂತೆ ಮಾ.೧೬ ರಂದು ಶಿವಾಲಿಕ್ ಹಡಗು ಭಾರತಕ್ಕೆ ಬಂದು ತಲುಪಿದೆ.


ಅಮೆರಿಕ- ಇರಾನ್ ಯುದ್ಧದಿಂದ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಹಲವಾರು ವಲಯಗಳ ಮೇಲೆ ಪರಿಣಾಮ ಬೀರುತ್ತಿದೆ. ರೆಸ್ಟೋರೆಂಟ್‌ಗಳು, ಹಾಸ್ಟೆಲ್‌ಗಳು ಮತ್ತು ಕೆಲವು ಕಂಪನಿಗಳು, ಮನೆಗಳು ಮತ್ತು ಹೋಟೆಲ್‌ಗಳಲ್ಲಿ ಭಾರೀ ಸಮಸ್ಯೆ ಎದುರಾಗಿದೆ.


ಎಲ್‌ಪಿಜಿ ಸರಬರಾಜಲ್ಲಿ ವಿಳಂಬವಾದರೆ ಮತ್ತಷ್ಟು ಸೇವೆಗಳ ಮೇಲೆ ಪರಿಣಾಮ ಬೀರಬಹುದು. ಇದರ ನಡುವೆ ಶಿವಾಲಿಕ್ ಹಡಗು ಭಾರತ ತಲುಪಿದೆ. ಮತ್ತೊಂದು ಹಡಗು ನಂದಾ ದೇವಿ ಮಾರ್ಚ್ ೧೭ರಂದು ಕಾಂಡ್ಲಾ ಬಂದರಿಗೆ ಆಗಮಿಸಲಿದೆ. ಇದರಿಂದ ಗ್ಯಾಸ್ ಸಮಸ್ಯೆ ಪರಿಹಾರವಾಗಲಿದೆ.


ಡಾ. ಎಸ್. ಜೈಶಂಕರ್ ಮತ್ತು ಇರಾನಿನ ವಿದೇಶಾಂಗ ಸಚಿವರ ನಡುವಿನ ಚರ್ಚೆಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಮಾತುಕತೆ ಬಳಿಕ ಭಾರತದ ಹಡಗುಗಳಿಗೆ ಹಾರ್ಮೋಜ್ ಮಾರ್ಗವನ್ನು ಸುರಕ್ಷಿತವಾಗಿ ದಾಟಲು ಅನುಮತಿ ದೊರೆತಿತ್ತು.