Home ಜಿಲ್ಲೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಅನುಮತಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಅನುಮತಿ

ಬೆಂಗಳೂರು.ಮಾ೧೬: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಗೃಹ ಸಚಿವರು ನೇಮಿಸಿದ್ದ ತಜ್ಞರ ಸಮಿತಿಯ ವರದಿಯ ಆಧಾರದ ಮೇಲೆ ಈ ಅನುಮತಿಯನ್ನು ನೀಡಲಾಗಿದೆ ಎಂದು ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.


ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಅವರು ಈ ಕುರಿತು ಮಾಹಿತಿ ನೀಡಿದ್ದು, ತಜ್ಞರ ಸಮಿತಿಯು ಶುಕ್ರವಾರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ತಂಡವು ತಮ್ಮ ವರದಿಯನ್ನು ಗೃಹ ಸಚಿವರಿಗೆ ಸಲ್ಲಿಸಿತ್ತು.


ಅದರ ಆಧಾರದ ಮೇಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ನಡೆಸಲು ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಎಸ್‌ಒಪಿಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ” ಎಂದು ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.


ಇದರೊಂದಿಗೆ ಐಪಿಎಲ್ ನ ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳನ್ನು ಸೇರಿದಂತೆ ಉಳಿದ ಪಂದ್ಯಗಳನ್ನು ಇಲ್ಲಿಯೇ ಆಯೋಜಿಸಲು ಅವಕಾಶ ಲಭಿಸಿದೆ. ಈ ಕ್ರಮಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪರವಾಗಿ ಗೃಹ ಸಚಿವರಿಗೆ ಧನ್ಯವಾದ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.