
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮಾ.18: ಕೊಲ್ಲಿ ಯುದ್ದದ ಹಿನ್ನಲೆಯಲ್ಲಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಸಿಗದೇ ಜನರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಲಿಂಡರ್ ದರ ಏರಿಕೆ ಮಾಡಿರೋದು ಗಾಯದ ಮೇಲೆ ಬರೆ ಎಳೆದಂತಾಗಿದೆಂದು. ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ನಗರದಲ್ಲಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.
ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ ನ್ರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ನೇತೃತ್ವದಲ್ಲಿ ಸೇರಿದ ಪಕ್ಷದ ಮುಖಂಡರು, ಕಾರ್ಯಕರ್ತರು ಸಿಲಿಂಡರ್ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಒಲೆ ಮೇಲೆ ಮಾಡಿದ ಟೀಯನ್ನು ಜನರಿಗೆ ಹಂಚುವ ಮೂಲಕ ವ್ಯಂಗ್ಯ ಪ್ರದರ್ಶಿಸಿದರು.
ಸರ್ಕಲ್ ನಲ್ಲಿ ಕಟ್ಟಿಗೆ ಹೊಲೆ ಮೇಲೆ ಟೀ ಮಾಡಿ ಅಕ್ರೋಶ ವ್ಯಕ್ತಪಡಿಸಿದರು. ಕಮರ್ಷಿಯಲ್ ಸಿಲಿಂಡರ್ ಕೊರತೆ ನೀಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಕೇಂದ್ರದ ನಿಲುವಿನಿಂದಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಮುಖಂಡರು ಹೇಳಿದರು.
ಪ್ರತಿಭಟನೆಯಲ್ಲಿ ಮೇಯರ್ ಗಾದೆಪ್ಪ, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಹೆಚ್.ಸಿದ್ದೇಶ್, ಮಂಜುಳಾ ಮೊದಲಾದವರು ಇದ್ದರು.






















