
ಬೀದರ್:ಮಾ.26: ಮಹಿಳೆಯರು ಉನ್ನತ ಸಾಧನೆಗೆ ಪ್ರಯತ್ನಿಸಬೇಕು ಎಂದು ಅಂತರರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಜಿಲ್ಲಾ ಸಂಚಾಲಕಿ ಡಾ. ಮಂಜುಳಾ ಮುಚಳಂಬೆ ಹೇಳಿದರು.
ನಗರದ ಶಿವನಗರದಲ್ಲಿ ಸರೋಮಾ ಟ್ರಸ್ಟ್, ಸೂರ್ಯ ಫೌಂಡೇಷನ್ ಹಾಗೂ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಮಹಿಳೆಯರು ಯಾವ ಕ್ಷೇತ್ರದಲ್ಲೂ ಪುರುಷರಿಗಿಂತ ಕಡಿಮೆ ಇಲ್ಲ ಎಂದು ತಿಳಿಸಿದರು.
ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಮಾನಸಿಕ ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಕಾಯ್ದುಕೊಳ್ಳಲು ಯೋಗ ಮತ್ತು ಧ್ಯಾನ ಮಾಡಬೇಕು ಎಂದು ತಿಳಿಸಿದರು.
ರೇಖಾ ಹೊನ್ನಾ, ವಿಜಯಲಕ್ಷ್ಮಿ, ಕವಿತಾ ಮತ್ತಿತರರು ಇದ್ದರು.





















