Home ಜಿಲ್ಲೆ ಕಲಬುರಗಿ ಸೇಡಂ:ವಿಶ್ವ ಬಾಯಿ ಆರೋಗ್ಯ ದಿನಾಚರಣೆ

ಸೇಡಂ:ವಿಶ್ವ ಬಾಯಿ ಆರೋಗ್ಯ ದಿನಾಚರಣೆ

ಕಲಬುರಗಿ,ಮಾ.26-ಜಿಲ್ಲಾಆಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಮಿಷನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಆರ್ ಸಿ ಹೆಚ್ ಕಾರ್ಯಾಲಯ ಮತ್ತು ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ (ಎನ್‍ಓಹೆಚ್‍ಪಿ), ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಸೇಡಂ ಹಾಗೂ ತಾಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸೇಡಂ ಸಹಯೋಗದೊಂದಿಗೆ ಸೇಡಂ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ವಿಶ್ವ ಬಾಯಿ ಆರೋಗ್ಯ ದಿನ (2026) ಆಚರಿಸಲಾಯಿತು.
“ಸಂತೋಷದ ಬಾಯಿ…ಸಂತೋಷದ ಜೀವನ” ಶೀರ್ಷಿಕೆ ಅಡಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಬಸವರಾಜ ಆರ್.ಉಡಗಿ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆ ಮೇಲೆ ಮುಖ್ಯ ಅತಿಥಿಗಳಾಗಿ ಆರೋಗ್ಯಾಧಿಕಾರಿ ( ಡಿ ಹೆಚ್ ಓ ) ಡಾ.ಶರಣಬಸಪ್ಪ ಕ್ಯಾತನಾಳ್, ಆರ್‍ಸಿಎಚ್ ಅಧಿಕಾರಿ ಡಾ.ಸಿದ್ದು ಪಾಟೀಲ್, ತಾಲ್ಲೂಕು ಆರೋಗ್ಯ ಅಧಿಕಾರಿ (ಟಿಎಚ್‍ಒ) ಡಾ. ಸಂಜೀವ್ ಪಾಟೀಲ್, ಆಡಳಿತ ವೈಧ್ಯಾಧಿಕಾರಿ ಡಾ.ಮನ್ನೆ ನಾಗರಾಜ, ಡಾ.ಸಂಧ್ಯಾ ಡಾಂಗೆ, ಡಾ.ಪ್ರೀಷಿಲಾ ಇದ್ದರು. ಹಿರಿಯ ದಂತ ಆರೋಗ್ಯ ಅಧಿಕಾರಿ ಡಾ. ಶ್ವೇತಾ ದೇವದುರ್ಗ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಹಿರಿಯ / ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಂರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಸಿರ್ಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.