Home ಜಿಲ್ಲೆ ಕಲಬುರಗಿ ಲಾರಿ ಹರಿದು ವ್ಯಕ್ತಿ ಸಾವು

ಲಾರಿ ಹರಿದು ವ್ಯಕ್ತಿ ಸಾವು

ವಾಡಿ,ಮಾ.26-ಇಲ್ಲಿಗೆ ಸಮೀಪದ ಲಾಡ್ಲಾಪುರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಮೇಲೆ ಲಾರಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಮೃತನನ್ನು ಲಾಡ್ಲಾಪುರ ಗ್ರಾಮದ ಶಿವರಾಯ ತಂದೆ ಶಿವಣ್ಣ ಹಳ್ಳಿ ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದು ಡಿವೈಎಸ್‍ಪಿ ಶಂಕರಗೌಡ ಪಾಟೀಲ, ವಾಡಿ ಪಿಎಸ್‍ಐ ತಿರುಮಲೇಶ ಕುಂಬಾರ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.