
ಬೆಂಗಳೂರು,ಮಾ26-ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿನ ಚಾಮುಂಡೇಶ್ವರಿ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ 500 ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಲಾಗಿತ್ತು ಹಾಗೂ ಮಂಡಳಿಯ ನೊಂದಾಯಿತ ಕಾರ್ಮಿಕರಿಗೆ RPL ಹಾಗೂ ಬ್ರಿಡ್ಜ್ ಕೋರ್ಸ್ಗ್ ತರಬೇತಿ ಕಾರ್ಯಕ್ರಮ ಯೋಜನೆಯನ್ನು ಅನುಷ್ಠಾನ ಮಾಡಿದರು.

ಈ ವೇಳೆ ಮಾಜಿ ಕಾರ್ಪೋರೇಟರ್ ಅಬ್ದುಲ್ ವಾಜಿದ್ ಹಾಗೂ ಸಂಘದ ಅಧ್ಯಕ್ಷ ಮುರುಗನ್ ಸೇರಿದಂತೆ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.




























