Home ಜಿಲ್ಲೆ ವಿಬಿಆರ್ ಆಸ್ಪತ್ರೆಯಲ್ಲಿ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸೆಯಲ್ಲಿ ಗಮನಾರ್ಹ ಸಾಧನೆ

ವಿಬಿಆರ್ ಆಸ್ಪತ್ರೆಯಲ್ಲಿ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸೆಯಲ್ಲಿ ಗಮನಾರ್ಹ ಸಾಧನೆ

ಯಾದಗಿರಿ:ಮಾ.೨೯: ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಮತ್ತೊಂದು ಹಂತಕ್ಕೆ ಏರಿಸುವ ರೀತಿಯಲ್ಲಿ, ನಗರದ ವಿಬಿಆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅಪರೂಪದ ಹಾಗೂ ಅತೀ ಸಂಕೀರ್ಣ ವೈದ್ಯಕೀಯ ಚಿಕಿತ್ಸೆಗಳ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಡೆದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಹಾಗೂ ತುರ್ತು ಚಿಕಿತ್ಸಾ ಸೇವೆಗಳ ಯಶಸ್ವಿ ನಿರ್ವಹಣೆ ಆಸ್ಪತ್ರೆಯ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ವೈದ್ಯರು ಮಾತನಾಡಿ, ಅಪಘಾತಗಳಿಂದ ಉಂಟಾಗುವ ಗಂಭೀರ ಅಂತರAಗ ಮೂಳೆ ಗಾಯಗಳಿಗೆ ಅತ್ಯಾಧುನಿಕ ವಿಧಾನಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂತಹ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವೈದ್ಯಕೀಯ ತಂಡ ತಜ್ಞತೆ ಪ್ರದರ್ಶಿಸಿದೆ ಎಂದು ತಿಳಿಸಿದರು.

ವಿಶೇಷವಾಗಿ, ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವುದು ಜೀವ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ‘ಗೋಲ್ಡನ್ ಅವರ್’ ಒಳಗೆ ಚಿಕಿತ್ಸೆ ದೊರೆತರೆ ಅಪಾಯದ ಮಟ್ಟವು ಗಣನೀಯವಾಗಿ ಕಡಿಮೆಯಾಗುತ್ತದೆ ಎಂದು ವೈದ್ಯರು ಸ್ಪಷ್ಟಪಡಿಸಿದರು.

ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಹಲವು ಗಂಭೀರ ಪ್ರಕರಣಗಳಲ್ಲಿ ವೈದ್ಯಕೀಯ ತಂಡ ಸಮಯೋಚಿತ ಕ್ರಮ ಕೈಗೊಂಡು ರೋಗಿಗಳನ್ನು ಸುರಕ್ಷಿತವಾಗಿ ಗುಣಮುಖಗೊಳಿಸಿರುವುದಾಗಿ ಅವರು ವಿವರಿಸಿದರು. ತಡವಾಗಿ ದಾಖಲಾಗಿದ್ದ ಪ್ರಕರಣಗಳನ್ನೂ ಸಹ ನಿಪುಣತೆಯಿಂದ ನಿರ್ವಹಿಸಿ ರೋಗಿಗಳ ಪ್ರಾಣ ಉಳಿಸಿರುವುದು ಗಮನಾರ್ಹ ಸಾಧನೆ ಎಂದು ಹೇಳಿದರು.

ಇದಕ್ಕುಪರಿ, ಜಿಲ್ಲೆಯಲ್ಲಿನ ಎಲುಬು ಹಾಗೂ ಸಂಧಿ ಸಮಸ್ಯೆಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನುರಿತ ತಜ್ಞರನ್ನು ಆಹ್ವಾನಿಸಿ ಉನ್ನತ ಮಟ್ಟದ ಶಸ್ತ್ರಚಿಕಿತ್ಸಾ ಸೇವೆಗಳನ್ನು ಸ್ಥಳೀಯ ಮಟ್ಟದಲ್ಲೇ ಒದಗಿಸುವ ಯೋಜನೆಯನ್ನು ರೂಪಿಸಲಾಗಿದೆ. ಇದರಿಂದ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ರೋಗಿಗಳಿಗೆ ದೂರದ ನಗರಗಳಿಗೆ ತೆರಳುವ ಅಗತ್ಯ ಕಡಿಮೆಯಾಗಲಿದೆ.

ಸಂಪೂರ್ಣ ವೈದ್ಯಕೀಯ ಸೌಲಭ್ಯಗಳು, ಅನುಭವಸಂಪನ್ನ ವೈದ್ಯಕೀಯ ಸಿಬ್ಬಂದಿ ಹಾಗೂ ಆಧುನಿಕ ತಂತ್ರಜ್ಞಾನಗಳ ಸಮನ್ವಯದ ಮೂಲಕ ವಿಬಿಆರ್ ಆಸ್ಪತ್ರೆ ಜಿಲ್ಲೆಯಲ್ಲಿ ವಿಶ್ವಾಸಾರ್ಹ ಆರೋಗ್ಯ ಕೇಂದ್ರವಾಗಿ ರೂಪುಗೊಳ್ಳುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಚಿಕಿತ್ಸೆಯಿಂದ ಗುಣಮುಖರಾದ ರೋಗಿಗಳು ಉಪಸ್ಥಿತರಿದ್ದು, ವೈದ್ಯಕೀಯ ಸೇವೆಗಳ ಕುರಿತು ತಮ್ಮ ಅನುಭವ ಹಂಚಿಕೊAಡರು.