Home ಜಿಲ್ಲೆ ಎಸ್‌ಎಸ್‌ಎಲ್‌ಸಿ ಬಳಿಕ ವಿದ್ಯಾರ್ಥಿಗಳಿಗೆ ದಿಕ್ಕು ತೋರಿಸುವ ಉಚಿತ ಬ್ರಿಡ್ಜ್ ಕೋರ್ಸ್ ಆರಂಭ : ಮೇಟಿ

ಎಸ್‌ಎಸ್‌ಎಲ್‌ಸಿ ಬಳಿಕ ವಿದ್ಯಾರ್ಥಿಗಳಿಗೆ ದಿಕ್ಕು ತೋರಿಸುವ ಉಚಿತ ಬ್ರಿಡ್ಜ್ ಕೋರ್ಸ್ ಆರಂಭ : ಮೇಟಿ

ಯಾದಗಿರಿ:ಮಾ.೨೯: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ನಂತರ ವಿದ್ಯಾರ್ಥಿಗಳು ಸರಿಯಾದ ದಿಕ್ಕಿನಲ್ಲಿ ಮುಂದುವರಿಯುವುದು ಅತ್ಯಂತ ಅವಶ್ಯಕವಾಗಿದ್ದು, ಅವರಲ್ಲಿನ ಗೊಂದಲ ನಿವಾರಣೆ ಹಾಗೂ ಶೈಕ್ಷಣಿಕ ಸಾಮರ್ಥ್ಯ ವೃದ್ಧಿಗೆ ನೆರವಾಗುವ ಉದ್ದೇಶದಿಂದ ನಗರದ ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ಸಮಗ್ರ ಉಚಿತ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ, ಭವಿಷ್ಯದ ಶಿಕ್ಷಣ ಮಾರ್ಗಗಳನ್ನು ಸ್ಪಷ್ಟವಾಗಿ ಪರಿಚಯಿಸುವ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ದಿಕ್ಕಿನಲ್ಲಿ ಈ ಕಾರ್ಯಕ್ರಮ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.

ಏಪ್ರಿಲ್ ೫ರಿಂದ ಆರಂಭಗೊAಡು ಮೇ ತಿಂಗಳವರೆಗೆ ನಡೆಯಲಿರುವ ಈ ವಿಶೇಷ ತರಬೇತಿ ಶಿಬಿರದಲ್ಲಿ ವಸತಿ ಸಹಿತ ಹಾಗೂ ವಸತಿ ರಹಿತ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಬ್ರಿಡ್ಜ್ ಕೋರ್ಸ್ನಲ್ಲಿ ಭಾಷಾ ಪ್ರಾವೀಣ್ಯತೆ, ಇಂಗ್ಲಿಷ್ ವ್ಯಾಕರಣದ ಗಾಢ ಅಧ್ಯಯನ, ಎಸ್‌ಎಸ್‌ಎಲ್‌ಸಿ ನಂತರದ ವಿವಿಧ ವೃತ್ತಿ ಮತ್ತು ಶಿಕ್ಷಣ ಆಯ್ಕೆಗಳ ಕುರಿತು ಸಮಗ್ರ ಮಾರ್ಗದರ್ಶನ, ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾದ ಚಟುವಟಿಕೆಗಳನ್ನು ಅನುಭವಸಂಪನ್ನ ಮತ್ತು ನುರಿತ ಉಪನ್ಯಾಸಕರಿಂದ ಬೋಧಿಸಲಾಗುತ್ತದೆ ಎಂದು ವಿವರಿಸಿದರು.

ಪ್ರತಿದಿನ ಬೆಳಿಗ್ಗೆಯಿಂದ ಸಂಜೆವರೆಗೆ ಶಿಸ್ತುಬದ್ಧವಾಗಿ ತರಗತಿಗಳು ನಡೆಯಲಿದ್ದು, ವಸತಿ ರಹಿತ ವಿದ್ಯಾರ್ಥಿಗಳಿಗೆ ಸಹ ತರಗತಿ ಬಳಿಕ ಶೈಕ್ಷಣಿಕ ಪುನರಾವರ್ತನೆ, ಸಂವಹನ ಕೌಶಲಾಭಿವೃದ್ಧಿ ಹಾಗೂ ಮನೋವಿಕಾಸ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಬಲಿಷ್ಠ ನೆಲೆ ಸಿದ್ಧವಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರಾಂಶುಪಾಲರು, ಗೋಪಾಲಕೃಷ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.