
ಚಿತ್ತಾಪುರ;ಎ.೧: ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಸೋಮಶೇಖರ ಶಿವಾಚಾರ್ಯರ ೫೯ ನೇ ಜನ್ಮದಿನದ ಪ್ರಯುಕ್ತ ವೇದಾ ಕಣ್ಣಿನ ಆಸ್ಪತ್ರೆ ಯಾದಗಿರಿ ಮತ್ತು ದೃಷ್ಟಿ ಕಣ್ಣಿನ ಆಸ್ಪತ್ರೆ ಕಲಬುರಗಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವನ್ನು ಕಂಬಳೇಶ್ವರ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ ೪ ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಮಲ್ಲು ಇಂದೂರ, ನಾಗರೆಡ್ಡಿ ಗೋಪಸೇನ್ ಅವರು ಹೇಳಿದರು.
ಪಟ್ಟಣದ ಕಂಬಳೇಶ್ವರ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಸಂಜೆ ೫ ಗಂಟೆಗೆ ಕಂಬಳೇಶ್ವರ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ನುರಿತ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಯಲಿದೆ ಹಾಗೂ ಬಿಪಿ, ಶುಗರ್ ತಪಾಸಣೆ ನಡೆಯಲಿದೆ, ಹೀಗಾಗಿ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ನಾಗರಾಜ ರೇಶ್ಮಿ, ಪ್ರಸಾದ್ ಅವಂಟಿ, ಜಗದೇವ ದಿಗ್ಗಾಂವಕರ್, ದೇವಿಂದ್ರ ಅರಣಕಲ್ ಇದ್ದರು.




















