Home ಜಿಲ್ಲೆ ಮಹಿಳಾ ಪೌರ ಕಾರ್ಮಿಕರಿಗೆ ಸತ್ಕಾರ

ಮಹಿಳಾ ಪೌರ ಕಾರ್ಮಿಕರಿಗೆ ಸತ್ಕಾರ

ಮುನವಳ್ಳಿ,ಏ2: ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದ ಸಭಾ ಭವನದಲ್ಲಿ ಪುರಸಭೆ ಮಹಿಳಾ ಒಕ್ಕೂಟಗಳ ಸದಸ್ಯರಿಂದ ವಿಶ್ವ ಮಹಿಳಾ ದಿನಾಚರಣೆ ಸತ್ಸಂಗ ಆಶ್ರಮದ ಮುಕ್ತಾನಂದ ಶ್ರೀಗಳ ಸಾನಿಧ್ಯದಲ್ಲಿ ಜರುಗಿತು.


ಮಹಿಳಾ ಪೌರ ಕಾರ್ಮಿಕರಿಗೆ ಹಾಗೂ ಪುರಸಭೆ ಅಧ್ಯಕ್ಷ ಈಶ್ವರ ಕರಿಕಟ್ಟಿ, ಉಪಾಧ್ಯಕ್ಷ ಡಿ.ಡಿ.ಕಿನ್ನೂರ ಸದಸ್ಯ ಸುಭಾಸ ಗೀದಿಗೌಡ ಇವರನ್ನು ಸನ್ಮಾನಿಸಿ ಗೌರವಿಸಿದರು.


ಒಕ್ಕೂಟಗಳ ಸರ್ವ ಸದಸ್ಯರು, ಲಕ್ಷ್ಮೀ ಹಾರಿಬೆಂಚಿ, ಮಹಿಳಾ ಸಂಘಗಳ ಸದಸ್ಯರು ಇತರರು ಉಪಸ್ಥಿತರಿದ್ದರು.