Home ಜಿಲ್ಲೆ ಕಲಬುರಗಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ...

ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ವಿಜೃಂಭಣೆಯಿಂದ ಆಚರಣೆ: ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್

ಕಲಬುರಗಿ, ಏ 02: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಮತ್ತು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಜಿಲ್ಲೆಯಾದ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹನೀಯರ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಸೌಹಾರ್ದಯುತವಾಗಿ ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಮುಖ್ಯ ಉದ್ದೇಶವಾಗಿರಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್ ಹಾಲ್)ನಲ್ಲಿ ಹಾಗೂ ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆ ಎದುರು ಬೆಳಿಗ್ಗೆ 8.30 ಗಂಟೆಗೆ ಗೌರವಪೂರ್ವಕವಾಗಿ ಮಾಲಾರ್ಪಣೆ ಮಾಡಲಾಗುವುದು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಶಿಸ್ತುಬದ್ಧ ಮೆರವಣಿಗೆ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಯಂತಿ ಅಂಗವಾಗಿ ನಗರದ ಪ್ರಮುಖ ವೃತ್ತಗಳು, ಸಾರ್ವಜನಿಕ ಸ್ಥಳಗಳು ಹಾಗೂ ಮಹನೀಯರ ಪ್ರತಿಮೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಜೊತೆಗೆ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರದ ಶಿμÁ್ಟಚಾರದಂತೆ ಕಾರ್ಯಕ್ರಮಗಳನ್ನು ಆಯೋಜಿಸಿ, ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿ ಕೇವಲ ಮೆರವಣಿಗೆಗೆ ಸೀಮಿತವಾಗದೆ, ಯುವಜನತೆಗೆ ಮಹನೀಯರ ಆದರ್ಶಗಳು, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಕೃಷಿ ಮತ್ತು ಆಡಳಿತ ಸುಧಾರಣೆಗಳ ಕುರಿತು ಅರಿವು ಮೂಡಿಸಬೇಕೆಂದರು.
ಸಮುದಾಯ ಭವನಗಳ ಸುಣ್ಣ-ಬಣ್ಣ, ದುರಸ್ತಿ ಹಾಗೂ ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರಿಗೆ ನಿರ್ದೇಶನ ನೀಡಿದರು. ಶಾಲಾ-ಕಾಲೇಜುಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಜಯಂತಿ ಆಚರಿಸಲು ಹಾಗೂ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚಿಸಿದರು.
ಮೆರವಣಿಗೆಯ ಸಂದರ್ಭದಲ್ಲಿ ಆಸ್ಪತ್ರೆಗಳ ಮುಂಭಾಗ ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವುದರ ಜೊತೆಗೆ ಅಂಬುಲೆನ್ಸ್ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗದಂತೆ ಪೆÇಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಮುದಾಯದ ಮುಖಂಡರು ಮಾತನಾಡಿ, ಈ ಜಯಂತಿಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗದೆ, ಸಮಾಜದ ಎಲ್ಲಾ ವರ್ಗದ ಜನರು ಒಗ್ಗೂಡಿ ಆಚರಿಸುವಂತಾಗಬೇಕು. ಶಾಂತಿ ಮತ್ತು ಶಿಸ್ತಿನಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಎಲ್ಲಾ ಬಡಾವಣೆಗಳಿಂದ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೆ ಸಾಗಲಿದ್ದು, ವಿವಿಧ ಕಲಾ ತಂಡಗಳು ಭಾಗವಹಿಸಲಿವೆ. ಕಾರ್ಯಕ್ರಮ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಡಿಸಿಪಿ ಪ್ರವೀಣ ನಾಯಕ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಡಿ.ಎಚ್.ಒ. ಡಾ. ಶರಣಬಸಪ್ಪ ಕ್ಯಾತನಾಳ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.