Home ಜಿಲ್ಲೆ ಮಂಗಳೂರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ನಡುವೆ ಬೀದಿ ಕಾಳಗ; ವೀಡಿಯೋ ವೈರಲ್

ಇಂಜಿನಿಯರಿಂಗ್ ವಿದ್ಯಾರ್ಥಿಗಳ ನಡುವೆ ಬೀದಿ ಕಾಳಗ; ವೀಡಿಯೋ ವೈರಲ್

ಮಂಗಳೂರು: ನಗರದ ಹೊರವಲಯದ ಕೊಣಾಜೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಯಾವುದೋ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದವು ವಿಕೋಪಕ್ಕೆ ತಿರುಗಿ, ವಿದ್ಯಾರ್ಥಿಗಳು ಪರಸ್ಪರ ಹೊಡೆದಾಟಕ್ಕಿಳಿದಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲೇ ನಡೆದ ಈ ಗುಂಪು ಘರ್ಷಣೆಯನ್ನು ಕಂಡು ಸಾರ್ವಜನಿಕರು ಹಾಗೂ ಇತರ ವಿದ್ಯಾರ್ಥಿಗಳು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದು, ಈ ವೀಡಿಯೋ ಈಗ ವೈರಲ್ ಆಗಿದೆ.
ಈ ಗಲಾಟೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಬಗ್ಗೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ಅಥವಾ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.