
ಗದಗ,ಏ4: ದೇಶದ ಜನಸಂಖ್ಯೆ, ಸಾಮಾಜಿಕ ಸ್ಥಿತಿಗತಿಗಳ ಮಾಹಿತಿಯನ್ನು ಪ್ರತಿ 10 ವರ್ಷಕ್ಕೊಮ್ಮೆ ಸರ್ಕಾರವು ಸಂಗ್ರಹಿಸುವ ಪ್ರಕ್ರಿಯೆಯೇ ಜನಗಣತಿ ಪ್ರಕ್ರಿಯೆಯಾಗಿದೆ. ಇದು ದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಹಾಯಕವಾಗುತ್ತದೆ. ಯೋಜನೆಗಳನ್ನು ಸರಿಯಾಗಿ ರೂಪಿಸಿದಾಗ ಅಭಿವೃದ್ಧಿ ಕಾರ್ಯಗಳ ಅನುಷ್ಠಾನವು ಸರಳವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಗುರುವಾರ ಭಾರತೀಯ ಜನಗಣತಿ 2026-2027ಕ್ಕೆ ಸಂಬಂಧಿಸಿದಂತೆ ಜನಗಣತಿ ಸ್ವಯಂ ನೋಂದಣಿ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
2021 ರ ಜನಗಣತಿಯನ್ನು ಕೋವಿಡ್ ಕಾರಣದಿಂದ ವಿಳಂಬವಾಗಿದ್ದು ಭಾರತ ಜನಗಣತಿ 2027 ಪ್ರಾರಂಭವಾಗಿದ್ದು ಸಾರ್ವಜನಿಕರು ಅಧಿಕೃತ ಪೆÇೀರ್ಟಲ್ hಣಣಠಿ://se.ಛಿeಟಿsus.gov.iಟಿ ಪೆÇೀರ್ಟಲ್ ನಲ್ಲಿ ಲಾಗಿನ್ ಆಗಿ ತಮ್ಮ ಮನೆಯ ವಿವರ, ವಾಹನ , ಉದ್ಯೋಗ ಮುಂತಾದ ವಿವರಗಳನ್ನು ಏಪ್ರಿಲ್ 15 ರವರಗೆ ಭರ್ತಿ ಮಾಡಿದಾಗ ನಿಮಗೆ ಸ್ವಯಂ ಗಣತಿ ಗುರುತಿನ ಸಂಖ್ಯೆ (ಐಡಿ) ಲಭ್ಯವಾಗುತ್ತದೆ. ಗಣತಿದಾರರು ತಮ್ಮ ಮನೆಗೆ ಬಂದಾಗ ಈ ಐಡಿ ಸಂಖ್ಯೆ ಯನ್ನು ಒದಗಿಸಿದಾಗ ಗಣತಿ ಪ್ರಕ್ರಿಯೆ ತ್ವರಿತವಾಗಿಸಲು ಸಹಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿ ಈ ಬಾರಿಯ ಜನಗಣತಿಯಲ್ಲಿ ಸಾರ್ವಜನಿಕರು ಖುದ್ದಾಗಿ ಪೆÇೀರ್ಟಲ್ ಮೂಲಕ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 15 ರವರೆಗೆ ಸಾರ್ವಜನಿಕರು ಈ ಸೌಲಭ್ಯ ಬಳಸಿಕೊಳ್ಳಬಹುದು. ಏಪ್ರಿಲ್ 16 ರಿಂದ ಮೇ 15 ರ ಒಂದು ತಿಂಗಳ ಅವಧಿಯಲ್ಲಿ ನಿಯೋಜಿಸಿದ ಗಣತಿದಾರರು ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ನಡೆಸುವರು.
ಜನಗಣತಿ ಕಾರ್ಯವು ಮೊದಲ ಹಂತದಲ್ಲಿ ಮನೆ ಗಣತಿ ಕೈಗೊಳ್ಳಲಾಗುತ್ತಿದ್ದು 150 ರಿಂದ 200 ಕುಟುಂಬಗಳು ಅಥವಾ ಅಂದಾಜು 700- 800 ಜನಸಂಖ್ಯೆಗೆ ಅನುಗುಣವಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಒಂದು ಗಣತಿ ಬ್ಲಾಕ್ ರಚಿಸಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಆಡಳಿತಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಕರ ವಸೂಲಿಗಾರರು, ಜಲಗಾರರು, ನಗರ ಪ್ರದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ/ ಸಿಬ್ಬಂದಿಗಳು ಗ್ರಾಮ, ವಾರ್ಡ ತಾಲೂಕು ವಿಭಾಗದಂತೆ ಬ್ಲಾಕ್ ರಚನೆಯ ಕಾರ್ಯನಿರ್ವಹಿಸಿರುತ್ತಾರೆ. ಜಿಲ್ಲೆಯಲ್ಲಿ ಎಲ್ಲ ತಾಲೂಕುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸೇರಿ ಒಟ್ಟು 1905 ಗಣತಿ ಬ್ಲಾಕ್ ಗಳು ರಚನೆಯಾಗಿವೆ.
ಗದಗ 658. ನರಗುಂದ-175, ಶಿರಹಟ್ಟಿ- 160, ಮುಂಡರಗಿ-242, ಗಜೇಂದ್ರಗಡ-228, ಲಕ್ಷ್ಮೇಶ್ವರ- 196, ರೋಣ -246 ಸೇರಿದಂತೆ 1905 ಗಣತಿ ಬ್ಲಾಕ್ ಗಳು ರಚನೆಯಾಗಿವೆ.
ಈ ಜನಗಣತಿಯಲ್ಲಿ ಪ್ರತ್ಯೇಕವಾಗಿ 90 ಕೊಳಗೇರಿ ಪ್ರದೇಶಗಳನ್ನು ಗುರುತಿಸಲಾಗಿದೆ.
ಗಣತಿ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಶಿಕ್ಷಕರು ( ಸರ್ಕಾರಿ ಮತ್ತು ಅನುದಾನಿತ ) ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು, ನಿಲಯ ಮೇಲ್ವಿಚಾರಕರು ಮತ್ತು ಇತರೇ ಇಲಾಖೆಯ ಪ್ರಥಮ ಮತ್ತು ದ್ವಿತೀಯ ದರ್ಜೆಯ ಸಹಾಯಕರು/ ಸಿಬ್ಬಂದಿಗಳನ್ನು ಗಣತಿದಾರರನ್ನಾಗಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು/ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಮತ್ತು ಅಧಿಕಾರಿಗಳನ್ನು ಕನಿಷ್ಟ 6 ಜನ ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನಾಗಿ ನಿಯೋಜಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ 298 ಮೇಲ್ವಿಚಾರಕರು, 1480 ಗಣತಿದಾರರು, 1205 ಎಚ್‍ಎಲ್‍ಬಿಗಳು ಕಾರ್ಯನಿರ್ವಹಿಸಲಿದ್ದಾರೆ. ಪಟ್ಟಣ ಪ್ರದೇಶದಲ್ಲಿ 134 ಮೇಲ್ವಿಚಾರಕರು, 744 ಗಣತಿದಾರರು , 701 ಎಚ್ ಎಲ್ ಬಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬಿ.ಜಿ.ಗಿರಿತಿಮ್ಮಣ್ಣವರ ಅವರು ಸ್ವಯಂ ಎಣಿಕೆದಾರರು ತಮ್ಮ ಮಾಹಿತಿಯನ್ನು ಅಪ್‍ಲೋಡ್ ಮಾಡುವ ಕುರಿತು ಪಿ.ಪಿ.ಟಿ. ಮೂಲಕ ತಿಳಿಸಿಕೊಟ್ಟರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. ಕಿತ್ತೂರು ಕರ್ನಾಟಕ ಪತ್ರಿಕೆಯ ಸಂಪಾದಕರಾದ ಮಂಜುನಾಥ ಬಸಪ್ಪ ಅಬ್ಬಿಗೇರಿ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಆರ್.ಡಿ.ಪಿ.ಆರ್.ವಿಶ್ವವಿದ್ಯಾಲಯದ ಕುಲಪತಿ (ಪ್ರಭಾರ) ಮತ್ತು ಕುಲಸಚಿವ ಪೆÇ್ರ. ಡಾ. ಸುರೇಶ ವಿ. ನಾಡಗೌಡ್ರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಬಸವರಾಜ ಪಾಟೀಲ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್.ಬುರುಡಿ, ಜಿ.ಪಂ. ಅಧಿಕಾರಿ ಎಂ.ವಿ.ಚಳಗೇರಿ ಜನಗಣತಿ ಜಿಲ್ಲಾ ನೋಡಲ್ ಅಧಿಕಾರಿ ರಂಜಿತ್ ಜಾಲಾ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.






















